Monday, May 25, 2026
Google search engine

Homeಸ್ಥಳೀಯಹಾಸ್ಟೆಲ್, ಆಹಾರ ಗೋದಾಮು, ನಿರ್ಮಾಣಗೊಂಡಿರುವ ಕಟ್ಟಡ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಭೇಟಿ :...

ಹಾಸ್ಟೆಲ್, ಆಹಾರ ಗೋದಾಮು, ನಿರ್ಮಾಣಗೊಂಡಿರುವ ಕಟ್ಟಡ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಭೇಟಿ : ಪರಿಶೀಲನೆ

ಚಾಮರಾಜನಗರ : ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಆರ್. ವಿನೋತ್ ಪ್ರಿಯಾ ಅವರು ಇಂದು ಚಾಮರಾಜನಗರ ಪಟ್ಟಣದಲ್ಲಿ ವಿದ್ಯಾರ್ಥಿನಿಲಯ, ಆಹಾರ ನಿಗಮದ ಗೋದಾಮು, ನಿರ್ಮಾಣ ಹಂತದಲ್ಲಿರುವ ಶಾಲೆ, ಹಾಸ್ಟೆಲ್ ಕಾಮಗಾರಿಯನ್ನು ಪರಿಶೀಲಿಸಿದರು.

ನಗರದ ಪ್ರವಾಸಿಮಂದಿರ ಸಮೀಪ ಇರುವ ಕರ್ನಾಟಕ ಆಹಾರ ನಿಗಮದ ಗೋದಾಮಿಗೆ ಭೇಟಿ ನೀಡಿ ದಾಸ್ತಾನು ಮಾಡಲಾಗಿದ್ದ ಅಕ್ಕಿ, ರಾಗಿಯನ್ನು ಪರಿಶೀಲಿಸಿದರು. ಗುಣಮಟ್ಟವಿಲ್ಲದಿದ್ದಲ್ಲಿ ವಾಪಸ್ಸು ಕಳುಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ಧವಾಗಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡವನ್ನು ವೀಕ್ಷಿಸಿದರು. ಅಡುಗೆ ಮನೆ, ಭೋಜನಾಲಯ, ಅಧ್ಯಯನ ಕೊಠಡಿ, ಶೌಚಾಲಯ, ಸ್ಟೋರ್ ರೂಂ ಸೇರಿದಂತೆ ಮೂಲ ಸೌಲಭ್ಯಗಳ ಕುರಿತು ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು.

ಪಟ್ಟಣದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೂಲಸೌಕರ್ಯಗಳನ್ನು ವೀಕ್ಷಿಸಿದರು. ಹೊಸ ಕಟ್ಟಡ ಅವಶ್ಯಕತೆ ಇದ್ದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.

ಜಾಲಹಳ್ಳಿ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ವಿವೇಕ ಯೋಜನೆಯಡಿ ನಿರ್ಮಾಣವಾಗುತ್ತಿರುವ ಕೊಠಡಿ ಕಾಮಗಾರಿಯನ್ನು ವೀಕ್ಷಿಸಿದರು. ಕಾಮಗಾರಿ ಸಂಬಂಧ ಸಲಹೆ ಸೂಚನೆಗಳನ್ನು ನೀಡಿದರು.

ಜಿಲ್ಲಾಧಿಕಾರಿ ಶ್ರೀರೂಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮುನಿರಾಜು, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್. ಬಿಂದ್ಯಾ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಶೆಟ್ಟಿ, ಇತರೆ ಅಧಿಕಾರಿಗಳು ಇದ್ದರು.

RELATED ARTICLES
- Advertisment -
Google search engine

Most Popular