ಚಿಕ್ಕಮಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಬಿರುಗಾಳಿ ಜೋರಾಗ್ತಿದೆ. ಈಚೆಗೆ ಡಿಕೆಶಿ ಮುಂದಿನ ಸಿಎಂ ಆಗಬೇಕೆಂದು ಬಿಹಾರಿ ಮತದಾರರಿಂದ ಕೂಗು ಕೇಳಿಬಂದ ಬೆನ್ನಲ್ಲೇ ಸಿಎಂ ಗರಂ ಆಗಿದ್ದರು.
ಇಷ್ಟುದಿನ ತಾಳ್ಮೆಯಿಂದ.. ನಗುನಗುತ್ತಲೇ ಉತ್ತರಿಸುತ್ತಿದ್ದ ಸಿಎಂ ಹೈಕಮಾಂಡ್ ಹೇಳಿದ್ದಷ್ಟೇ ಫೈನಲ್ ಅಂತ ಗುಡುಗಿದ್ದರು. ಈ ಬೆನ್ನಲ್ಲೇ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ ಗುರೂಜಿ ಭವಿಷ್ಯ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ನವೆಂಬರ್ 26ರ ಬಳಿಕ ಡಿ.ಕೆ ಶಿವಕುಮಾರ್ ಸಿಎಂ ಆಗೋದನ್ನು ಯಾರೂ ತಡೆಯೋಕಾಗಲ್ಲ ಅಂತ ಭವಿಷ್ಯ ನುಡಿದಿದ್ದಾರೆ. ನವೆಂಬರ್ 26ರ ಬಳಿಕ ಡಿಕೆಶಿ ಸಿಎಂ ಆಗೋದ್ನ ಯಾರೂ ತಡೆಯಲಾಗದು. ಡಿಕೆಶಿ ಸಿಎಂ ಆದ್ರೂ ಕೇವಲ ಒಂದೂವರೆ ವರ್ಷ ಅಷ್ಟೆ ಅಧಿಕಾರ ಮಾಡೋದು ಅಂತ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಅವರಿಗೆ ಸಿಎಂ ಯೋಗ ಇದೆ, ಆಗೇ ಆಗ್ತಾರೆ. 2031ರ ವರೆಗೆ ರಾಜನಂತೆ ಇರ್ತಾರೆ. ಏಕೆಂದ್ರೆ ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ಈ ಯೋಗ ಎಲ್ಲರಿಗೂ ಇರಲ್ಲ, ಅವರ ಜಾತಕದಲ್ಲಿ ಇದೆ.
ಹಾಗಾಗಿ ಸಿಎಂ ಆಗೇ ಆಗ್ತಾರೆ. ಒಂದೂವರೆ ವರ್ಷದ ಹಿಂದೆಯೇ ಅವರಿಗೆ ಹೇಳಿ ಮಂತ್ರಾಕ್ಷತೆ ಕೊಟ್ಟಿದ್ದೇನೆ. ಅವರಿಗೆ ಮುಖ್ಯಮಂತ್ರಿ ಯೋಗ ಇದೆ, ಅದನ್ನು ಯಾರೂ ತಪ್ಪಿಸಲು ಆಗಲ್ಲ ಎಂದು ಭವಿಷ್ಯ ನುಡಿದಿದ್ದಾರೆ.



