Sunday, May 31, 2026
Google search engine

Homeರಾಜಕೀಯರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್; ಪ್ರಮಾಣವಚನ ದಿನಾಂಕ ಕುರಿತು ಚರ್ಚೆ ಸಾಧ್ಯತೆ

ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್; ಪ್ರಮಾಣವಚನ ದಿನಾಂಕ ಕುರಿತು ಚರ್ಚೆ ಸಾಧ್ಯತೆ

ಬೆಂಗಳೂರು: ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎನ್ನಲಾಗುತ್ತಿರುವ ಡಿಕೆ ಶಿವಕುಮಾರ್ ಅವರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು.

ಲೋಕಭವನದಲ್ಲಿ ನಡೆದ ಈ ಭೇಟಿಯಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಕೂಡ ಉಪಸ್ಥಿತರಿದ್ದರು. ರಾಜ್ಯಪಾಲರು ಮಧ್ಯಾಹ್ನ ಧರ್ಮಸ್ಥಳಕ್ಕೆ ತೆರಳಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆಯೇ ಭೇಟಿ ನಿಗದಿಯಾಗಿತ್ತು. ಈ ವೇಳೆ ಪ್ರಮಾಣವಚನ ಸಮಾರಂಭದ ದಿನಾಂಕ ಸೇರಿದಂತೆ ಪ್ರಮುಖ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆದಿರುವ ಸಾಧ್ಯತೆ ಇದೆ. ಸಂಜೆ 4 ಗಂಟೆಗೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಘೋಷಿಸುವ ನಿರೀಕ್ಷೆಯಿದೆ.

RELATED ARTICLES
- Advertisment -
Google search engine

Most Popular