ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ.
ಇದರ ನಡುವೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮುನ್ನ ಡಿಕೆ ಶಿವಕುಮಾರ್ ಅವರು ಇಂದು ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ. ರಾಜ್ಯಪಾಲರು ಸಂಜೆ ಧರ್ಮಸ್ಥಳ ಪ್ರವಾಸಕ್ಕೆ ತೆರಳಲಿರುವ ಹಿನ್ನೆಲೆ, ಅದಕ್ಕೂ ಮುನ್ನವೇ ಭೇಟಿ ನಡೆಸಲು ನಿರ್ಧರಿಸಿದ್ದಾರೆ.
ಡಿಕೆಶಿ ಆಗಮನದ ಹಿನ್ನೆಲೆಯಲ್ಲಿ ಲೋಕಭವನದ ಮುಂಭಾಗದಲ್ಲಿ ಕಟ್ಟುನಿಟ್ಟಿನ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ.



