ಮಂಡ್ಯ: ಪ್ರಜ್ವಲ್ ರೇವಣ್ಣ ಪ್ರಕರಣದ ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ ಕೆ ಶಿವಕುಮಾರ್ ಕೈವಾಡ ಹಿನ್ನಲೆ ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಜೆಡಿಎಸ್ ಕಾರ್ಯಕರ್ತರ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಡಿಕೆಶಿ ಭಾವಚಿತ್ರಕ್ಕೆ ಚಪ್ಪಲಿ ಏಟಿನ ಸೇವೆ ನಡೆಸಿ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ.
ಪೆನದ ಡ್ರೈವ್ ಹಂಚಿ ಸಾವಿರಾರು ಮಹಿಳೆಯರ ಮಾನ ಹರಾಜು ಹಾಕಿದ ಡಿಕೆಶಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ರಾಜಕೀಯ ದುರುದ್ದೇಶದಿಂದ ದೇವೇಗೌಡ ಕುಟುಂಬದ ವಿರುದ್ಧ ಡಿಕೆಶಿ ಪಿತೂರಿ ಬಗ್ಗೆ ಕಾರ್ಯಕರ್ತರ ಆರೋಪಿಸಿದ್ದಾರೆ.
ಕುತಂತ್ರದಿಂದ ಜೆಡಿಎಸ್ ಪಕ್ಷ ಮುಗಿಸಲು ಹೊರಟ ಡಿಕೆಶೆ ನಡೆಗೆ ಜೆಡಿಎಸ್ ಕಾರ್ಯಕರ್ತರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಮೈ- ಬೆಂ ಹೆದ್ದಾರಿ ತಡೆದು ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಲು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಜಿಲ್ಲೆಯ ಹಾಲಿ ಹಾಗು ಮಾಜಿ ಶಾಸಕರು ಸೇರಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.