ಮಂಡ್ಯ: ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಮುಗಿಸಿ ಬೆಂಗಳೂರಿಗೆ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗೌಡಹಳ್ಳಿ ಟಿಎಂ ಹೊಸೂರು ಬಳಿ ಎಕ್ಸ್ಪ್ರೆಸ್ ವೇನಲ್ಲಿ ನಡೆದಿದೆ.
ವಾಹನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಪರಿಣಾಮವಾಗಿ ಎಸ್ಕಾರ್ಟ್ ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೃಷ್ಟವಶಾತ್ ಡಿಕೆಶಿ ಪ್ರಯಾಣಿಸುತ್ತಿದ್ದ ಕಾರಿಗೆ ಯಾವುದೇ ಅಪಾಯವಾಗಿಲ್ಲ. ಘಟನೆ ಬಳಿಕ ಅವರು ಸುರಕ್ಷಿತವಾಗಿ ಬೆಂಗಳೂರಿಗೆ ತೆರಳಿದ್ದಾರೆ.