Wednesday, February 18, 2026
Google search engine

Homeಸ್ಥಳೀಯಕಸ ವಿಚಾರದಲ್ಲಿ ಬಿಜೆಪಿ ವಿರುದ್ಧ ಡಿಕೆಶಿ ಕಿಡಿ : ಅನುದಾನಕ್ಕೆ ಬ್ಲ್ಯಾಕ್‌ಮೇಲ್‌ ಆರೋಪ : ಡಿಕೆಶಿ

ಕಸ ವಿಚಾರದಲ್ಲಿ ಬಿಜೆಪಿ ವಿರುದ್ಧ ಡಿಕೆಶಿ ಕಿಡಿ : ಅನುದಾನಕ್ಕೆ ಬ್ಲ್ಯಾಕ್‌ಮೇಲ್‌ ಆರೋಪ : ಡಿಕೆಶಿ

ಬೆಂಗಳೂರು : ಬಿಜೆಪಿಯ ಎಲ್ಲಾ ಶಾಸಕರು ಬ್ಲ್ಯಾಕ್‌ಮೇಲ್‌ ಮಾಡ್ತಿದ್ದಾರೆ. ಗೌರವದಿಂದ ಇದ್ರೆ ಸರಿ, ಇಲ್ಲದಿದ್ರೆ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕಾಗುತ್ತೆ. ಅಶೋಕ್‌, ವಿಜಯೇಂದ್ರ ಮನೆ ಮುಂದೆನೇ ಕಸ ಹಾಕಿಸಬೇಕಾಗುತ್ತೆ ಅಂತ ಡಿಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ ಕೊಟ್ಟರು.

ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ನಿಯಮಬಾಹಿರವಾಗಿ ಸಾಗಿಸಲಾಗುತ್ತಿದೆ ಎನ್ನುವ ಬಿಜೆಪಿ ಶಾಸಕರ ಆರೋಪಕ್ಕೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. 

ಎಲ್ಲಾ ಶಾಸಕರು ಬ್ಲ್ಯಾಕ್‌ ಮೇಲ್‌ ಮಾಡ್ತಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅನುದಾನ ಬೇಕು ಅಂತ ಆಕ್ಸಿಡೆಂಟ್‌ ವಿಚಾರ ಮುಂದಿಟ್ಟುಕೊಂಡು ಬ್ಲ್ಯಾಕ್‌ ಮೇಲ್‌ ಮಾಡ್ತಿದ್ದಾರೆ. ಎಲ್ಲರೂ ಗೌರವದಿಂದ ಇದ್ರೆ ಸರಿ, ಇಲ್ಲದಿದ್ರೆ ಕರುಣೆ ತೋರಿಸಲ್ಲ. ಎಸ್ಮಾ ಅಡಿಯಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತೆ ಎಂದು ಎಚ್ಚರಿಸಿದರು. 

ಕಸ ಎಲ್ಲಾದ್ರೂ ಒಂದು ಕಡೆ ಹಾಕಬೇಕಲ್ವಾ? ಅಲ್ಲೂ ಬೇಡ, ಇಲ್ಲೂ ಬೇಡ ಅಂದ್ರೆ ಎಲ್ಲಿಗೆ ಹೋಗಬೇಕು ? ಈ ಕಸ ಅಶೋಕ್ ಮನೆಗೆ, ವಿಜಯೇಂದ್ರ ಮನೆಗೆ ಅಥವಾ ಬಿಜೆಪಿ ಆಫೀಸಿಗೆ ಹೋಗಬೇಕು. ನಿನ್ನೆ ಲಿಂಬಾವಳಿ ಪ್ರತಿಭಟನೆ ಮಾಡಿದ್ದಾರೆ, ಇವತ್ತು ಅವನು ದೊಡ್ಡಬಳ್ಳಾಪುರ ಎಂಎಲ್‌ಎ ಮಾಡಿದ್ದಾನೆ. ಇವರೆಲ್ಲ ತಮ್ಮ ಕ್ಷೇತ್ರಕ್ಕೆ ಅನುದಾನ ಬೇಕು ಅಂತ ಬ್ಲ್ಯಾಕ್ ಮೇಲ್ ಮಾಡ್ತಿದ್ದಾರೆ. ಸುಮ್ಮನೆ ಇರಲಿಲ್ಲ ಅಶೋಕ್‌, ವಿಜಯೇಂದ್ರ ಮನೆ ಮುಂದೆನೇ ಕಸ ಹಾಕಿಸ್ತೀನಿ, ಅಥವಾ ಬಿಜೆಪಿ ಕಚೇರಿ ಮುಂದೆಯೇ ಕಸ ಹಾಕಿಸ್ತೀನಿ ಎಂದು ವಾರ್ನಿಂಗ್‌ ಕೊಟ್ಟರು.

RELATED ARTICLES
- Advertisment -
Google search engine

Most Popular