Tuesday, July 1, 2025
Google search engine

Homeಅಪರಾಧದೊಡ್ಡಬಳ್ಳಾಪುರ: ಭೀಮೇಶ್ವರ ಬೆಟ್ಟಕ್ಕೆ ಹೊರಟಿದ್ದ ತಂಡದ ಕಾರು ಪಲ್ಟಿ: ಐವರು ದುರ್ಮರಣ

ದೊಡ್ಡಬಳ್ಳಾಪುರ: ಭೀಮೇಶ್ವರ ಬೆಟ್ಟಕ್ಕೆ ಹೊರಟಿದ್ದ ತಂಡದ ಕಾರು ಪಲ್ಟಿ: ಐವರು ದುರ್ಮರಣ

ದೊಡ್ಡಬಳ್ಳಾಪುರ: ನಾಯಕರಂಡನಹಳ್ಳಿ ಸಮೀಪದ ಗೌರಿಬಿದನೂರು ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ. ಈಶ್ವರಪ್ಪ, ಪುರುಷೋತ್ತಮ (75), ಕಾಳಪ್ಪ (65), ನಾರಾಯಣಪ್ಪ (70) ಹಾಗೂ ಚಾಲಕ ಕಾರ್ತಿಕ್ ಆಗಿದ್ದಾರೆ.

ಇನ್ನೋವಾ ಕಾರಿನಲ್ಲಿ ಎಂಟು ಮಂದಿ ಭೀಮೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದರು. ಲಾರಿಯನ್ನು ಓವರ್‌ಟೇಕ್ ಮಾಡುವ ವೇಳೆ ಎದುರಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ತಪ್ಪಿಸಲು ಚಾಲಕ ಯತ್ನಿಸಿದ್ದು, ನಿಯಂತ್ರಣ ತಪ್ಪಿದ ಪರಿಣಾಮ ಕಾರು ಪಲ್ಟಿಯಾಗಿದೆ.

ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.

RELATED ARTICLES
- Advertisment -
Google search engine

Most Popular