Sunday, June 21, 2026
Google search engine

Homeಆರೋಗ್ಯಯೋಗದಿಂದ ಆರೋಗ್ಯಕರ ಜೀವನ ಸಾಧ್ಯ - ಹೆಚ್.ಡಿ. ಕುಮಾರಸ್ವಾಮಿ

ಯೋಗದಿಂದ ಆರೋಗ್ಯಕರ ಜೀವನ ಸಾಧ್ಯ – ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: ಯೋಗವು ಭಾರತದ ಪ್ರಾಚೀನ ಸಂಸ್ಕೃತಿ ಮತ್ತು ಪರಂಪರೆಯ ಅಮೂಲ್ಯ ಕೊಡುಗೆಯಾಗಿದೆ. ಯೋಗವು ದೇಹ, ಮನಸ್ಸು ಮತ್ತು ಆತ್ಮದ ನಡುವೆ ಸಮತೋಲನವನ್ನು ಸಾಧಿಸುವ ಸಾಧನವಾಗಿದೆ. ಇಂದಿನ ವೇಗದ ಜೀವನಶೈಲಿಯಲ್ಲಿ ಮಾನಸಿಕ ಒತ್ತಡ, ಆತಂಕ ಮತ್ತು ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಯೋಗವು ಆರೋಗ್ಯಕರ ಜೀವನಕ್ಕೆ ಅತ್ಯುತ್ತಮ ಮಾರ್ಗವಾಗಿದೆ ಎಂದು ಭಾರತ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್. ಡಿ. ಕುಮಾರಸ್ವಾಮಿ ರವರು ತಿಳಿಸಿದರು.

ಇಂದು ನಗರದ ಪಿ. ಇ. ಟಿ. ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮೈ ಭಾರತ್ ಕೇಂದ್ರ, ರೆಡ್ ಕ್ರಾಸ್ ಸಂಸ್ಥೆ, ಎ. ಎಫ್. ಐ. ಮಂಡ್ಯ ಎಸ್. ಪಿ. ವೈ. ಎಸ್. ಎಸ್ ಹಾಗೂ ಜಿಲ್ಲಾ ವಿವಿಧ ಯೋಗನಿರತ ಸಂಘ ಸಂಸ್ಥೆಗಳ ವತಿಯಿಂದ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ -2026* ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿಶ್ವ ಯೋಗದಿನವನ್ನು ವಿಶ್ವದಲ್ಲಿ ಎಲ್ಲಾ ಭಾಗಗಳಲ್ಲೂ ಸಹ ಚರಣೆ ಮಾಡುತಿದ್ದು, 2,500 ಸ್ಥಳಗಳಲ್ಲಿ ಆಚರಣೆ ಮಾಡಲಾಗುತ್ತಿದೆ.ಯೋಗ ಮತ್ತು ಧ್ಯಾನ ಮಾಡುವುದರಿಂದ ಜೀವನದಲ್ಲಿ ಅತ್ಯಂತ ಉತ್ತಮ ಅರೋಗ್ಯವನ್ನು ಪಡೆಯಬಹುದಾಗಿದೆ. ಎಲ್ಲರೂ ಪ್ರತಿ ನಿತ್ಯ 15 ರಿಂದ 20 ನಿಮಿಷಗಳ ಕಾಲ ಯೋಗ ಮತ್ತು ಧ್ಯಾನ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಶ್ರೀರಂಗಪಟ್ಟಣ ಬೇಬಿ ಮಠ ಚಂದ್ರವನದ ಪೀಠಾಧಿಪತಿಗಳಾದ ಶ್ರೀ ಡಾ. ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿ ನಮ್ಮ ದೇಶದ ಮಕ್ಕಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಅವಳವಡಿಸಿಕೊಳ್ಳಬೇಕು. ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ. ಇದು ಮನಸ್ಸಿನ ಏಕಾಗ್ರತೆ, ಆತ್ಮ ನಿಯಂತ್ರಣ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಉತ್ತೇಜಿಸುವ ಸಮಗ್ರ ಜೀವನ ಪದ್ಧತಿಯಾಗಿದೆ. ನಿಯಮಿತವಾಗಿ ಯೋಗಾಭ್ಯಾಸ ಮಾಡುವುದರಿಂದ ದೇಹದ ನಮ್ಯತೆ ಹೆಚ್ಚುತ್ತದೆ, ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ ಮತ್ತು ಹೃದಯ, ಉಸಿರಾಟ ಹಾಗೂ ಜೀರ್ಣಕ್ರಿಯೆಯ ಆರೋಗ್ಯ ಸುಧಾರಿಸುತ್ತದೆ. ಜೊತೆಗೆ, ಒತ್ತಡ, ಖಿನ್ನತೆ ಮತ್ತು ಆತಂಕದಂತಹ ಮಾನಸಿಕ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹ ಯೋಗವು ಸಹಾಯಕವಾಗಿದೆ ಎಂದು ತಿಳಿಸಿದರು.

ಶ್ರೀ ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್(ರಿ) ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಕುಮಾರ,ಎಸ್. ಬಿ. ಎಜುಕೇಷನ್ ಟ್ರಸ್ಟ್ ನ ಕಾರ್ಯದರ್ಶಿಗಳು ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಮೀರಾಶಿವಲಿಂಗಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಕೆ. ಆರ್. ನಂದಿನಿ, ಅಪರ ಜಿಲ್ಲಾಧಿಕಾರಿಗಳಾದ ಬಿ. ಸಿ. ಶಿವಾನಂದಮೂರ್ತಿ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶೋಭರಾಣಿ ವಿ. ಜೆ. ರವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular