ಬೆಂಗಳೂರು: 2025ರ ಜೂನ್ 4ರಂದು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಐಪಿಎಲ್ ವಿಜೇತೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಈ ದುಃಖಕರ ಘಟನೆಗೆ ಸಂಬಂಧಿಸಿದಂತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸುದ್ದಿಗೋಷ್ಠಿಯಲ್ಲಿ ಕಣ್ಣೀರು ಹಾಕಿ ವಿಷಾದ ವ್ಯಕ್ತಪಡಿಸಿದ್ದಾರೆ. ಅವರು, “ಈ ಸಮಯದಲ್ಲಿ ರಾಜಕೀಯ ಚರ್ಚೆ ಬೇಡ; ವೈಪಲ್ಯದ ಬಗ್ಗೆ ಮಾತನಾಡುವ ಸಮಯವಲ್ಲ,” ಎಂದು ಹೇಳಿದ್ದಾರೆ. ಅವರು ಮುಂದುವರಿದು, “ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು,” ಎಂದು ಸೂಚಿಸಿದ್ದಾರೆ.