Thursday, May 29, 2025
Google search engine

Homeಆರೋಗ್ಯಮಕ್ಕಳಿಗೆ ಶೀತ, ಕೆಮ್ಮು ಇದ್ದರೆ ಶಾಲೆಗೆ ಕಳುಹಿಸಬೇಡಿ: ಸಚಿವ ಡಾ.ಶರಣ ಪ್ರಕಾಶ್‌

ಮಕ್ಕಳಿಗೆ ಶೀತ, ಕೆಮ್ಮು ಇದ್ದರೆ ಶಾಲೆಗೆ ಕಳುಹಿಸಬೇಡಿ: ಸಚಿವ ಡಾ.ಶರಣ ಪ್ರಕಾಶ್‌

ಬೆಂಗಳೂರು: ಬೆಂಗಳೂರಿನಲ್ಲಿ ಮೇ 29ರಿಂದ ಬೇಸಿಗೆ ರಜೆ ಬಳಿಕ ಶಾಲೆಗಳು ಪುನಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಿಗೆ ಜ್ವರ, ಶೀತ, ಕೆಮ್ಮು ಇದ್ದರೆ ಶಾಲೆಗೆ ಕಳುಹಿಸಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ಶೀಘ್ರ ನೆಗಡಿ ಬಂದರೆ ಪೋಷಕರಿಗೆ ಕರೆ ಮಾಡಿ ಮನೆಗೆ ಕಳುಹಿಸಬೇಕು ಎಂದರು.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಗರ್ಭಿಣಿಯರು ಮಾಸ್ಕ್ ಧರಿಸುವುದು ಸೂಕ್ತ. ವೈದ್ಯಕೀಯ ಸಿಬ್ಬಂದಿಗೆ ಮಾತ್ರ ಕಡ್ಡಾಯವಾಗಿದೆ ಎಂದು ಹೇಳಿದರು.

ಈ ನಡುವೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲೆಗಳಿಗೆ ಸದ್ಯಕ್ಕೆ ಯಾವುದೇ ಹೊಸ ಕೋವಿಡ್ ಮಾರ್ಗಸೂಚಿ ಇಲ್ಲ ಎಂದು ಹೇಳಿದರು. ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಂದರೆ ಕ್ರಮ ಕೈಗೊಳ್ಳಲಾಗುತ್ತದೆ. ಆರೋಗ್ಯ ಸಮಸ್ಯೆ ಇರುವ ಮಕ್ಕಳು ಶಾಲೆಗೆ ಬಾರದಿರಬೇಕು ಎಂಬ ನಿರ್ಧಾರ ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

RELATED ARTICLES
- Advertisment -
Google search engine

Most Popular