ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಮೈಸೂರು ಗ್ರಾಮಾಂತರ ಕಾಂಗ್ರೇಸ್ ಅಧ್ಯಕ್ಷ ಡಾ. ಬಿ ಜೆ ವಿಜಯ್ ಕುಮಾರ್ ಗೆ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಕಲ್ಪಿಸಿಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮತ್ತು ಕೆಪಿಸಿಸಿ ಅಧ್ಯಕ್ಷ ಹಾಗು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಂಚಿನ ಕೆರೆ ಕೆ.ಪಿ.ಯೋಗೇಶ್ ಮನವಿ ಮಾಡಿದ್ದಾರೆ.
ಡಾ.ಬಿ ಜೆ ವಿಜಯ್ ಕುಮಾರ್ ಮೈಸೂರು ಜಿಲ್ಲೆಯಲ್ಲಿ ಕಳೆದ ಸುಮಾರು 20 ವರ್ಷ ಗಳಿಂದ ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತನಾಗಿ ಮತ್ತು ಜಿಲ್ಲಾ NSUI ಅಧ್ಯಕ್ಷರು, ಜಿಲ್ಲಾ ಯೂತ್ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ದಕ್ಷತೆ ಮತ್ತು ಪ್ರಾಮಾಣಿಕತೆ ಯಿಂದ ಕೆಲಸ ಮಾಡಿಕೊಂಡು ಬಂದಿದ್ದು ಇವರ ಸೇವೆಯನ್ನು ಗುರುತಿಸಿ ಈ ಅವಕಾಶ ನೀಡುವಂತೆ ಕೋರಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆ ನಲ್ಲಿ ಅತಿ ಹೆಚ್ಚು ಸ್ಥಾನ ಬರುವುದ್ದಕ್ಕೆ ಡಾಕ್ಟರ್ ಬಿ ಜೆ ವಿಜಯ್ ಕುಮಾರ್ ಪತ್ರ ದೊಡ್ಡದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ಸಾಕಷ್ಟು ಶ್ರಮಿಸಿರುವ ಡಾ.ವಿಜಯ್ ಕುಮಾರ್ ಅವರಿಗೆ ಮುಂದಿನ ಜೂನ್ ಇಲ್ಲವೇ ಜೂಲೈ ತಿಂಗಳಿ ನಲ್ಲಿ ನಡೆಯುವ ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ದೆಗೆ ಅವಕಾಶ ಮಾಡಿ ಕೊಡುವಂತೆ ಮನವಿ ಮಾಡಿದ್ದಾರೆ.
ಅತಿ ಶೀಘ್ರದಲ್ಲಿಯೇ ರಾಜ್ಯ ಕಾಂಗ್ರೇಸ್ ಹಿಂದೂಳಿದ ವರ್ಗದ ವಿಭಾಗದ ಪದಾಧಿಕಾರಿಗಳ ನಿಯೋಗ ಮುಖ್ಯಮಂತ್ರಿ ಸಿದ್ದ ರಾಮಯ್ಯ ಮತ್ತು ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನು ಬೇಟಿ ಮಾಡಿ ವಿಜಯ್ ಕುಮಾರ್ ಅವರಿಗೆ ಈ ಸ್ಥಾನವನ್ನು ಕಲ್ಪಿಸಿ ಕೊಡುವಂತೆ ಮನವಿ ಮಾಡಲಾಗುವುದು ಎಂದು “ರಾಜ್ಯಧರ್ಮ”ಕ್ಕೆ ಕಂಚಿನಕೆರೆ ಕೆ.ಪಿ.ಯೋಗೇಶ್ ತಿಳಿಸಿದರು.