ಮೈಸೂರು: ಆರೋಗ್ಯ ಕ್ಷೇತ್ರದಲ್ಲಿ ಮಾಡಿದ ಅಪೂರ್ವ ಸಾಧನೆಯನ್ನು ಪರಿಗಣಿಸಿ ಭಾರತ್ ಆಸ್ಪತ್ರೆ ಮತ್ತು ಆಂಕೊಲಾಜಿ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಹೆಲ್ತ್‌ಕೇರ್ ಗ್ಲೋಬಲ್ ಎಂಟರ್ ಪ್ರೈಸಸ್ ಲಿಮಿಟೆಡ್‌ನ ಕಾರ್ಯಕಾರಿ ಅಧ್ಯಕ್ಷ ಡಾ.ಬಿ.ಎಸ್. ಅಜಯ್ ಕುಮಾರ್ ಅವರಿಗೆ ಇಂಟಗ್ರೇಟೆಡ್ ಹೆಲ್ತ್ ಅಂಡ್ ವೆಲ್ಬೀಯಿಂಗ್ ಸಮ್ಮಿಟ್ ಹಾಗೂ ಗ್ಲೋಬಲ್ ಹೆಲ್ತ್ ಲೀಡರ್ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ.
ಇತ್ತೀಚಿಗೆ ದುಬೈನಲ್ಲಿ ನಡೆದ ಸಮಾರಂಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಡಾ.ಅಜeಯ್ ಕುಮಾರ್ ಮಾಡಿರುವ ಸೇವೆ ಹಾಗೂ ಆರೋಗ್ಯ ರಕ್ಷಣಾ ಕ್ರಮಗಳನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಡಾ. ಅಜಯ್‌ಕುಮಾರ್ ಅವರು ಬೆಂಗಳೂರಿನಲ್ಲಿ ತಮ್ಮ ಕಾರ್ಯದೊತ್ತಡದ ಕಾರಣದಿಂದ ಕಾರ್ಯಕ್ರಮಕ್ಕೆ ಖುದ್ದಾಗಿ ಹಾಜರಾಗಲು ಸಾಧ್ಯವಾಗಲಿಲ್ಲ. ಆದರೂ ದುಬೈನಲ್ಲಿ ನೆಲೆಸಿರುವ ಅವರ ರೋಗಿಗಳೊಬ್ಬರ ಮಗಳು ಅವರ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.
ಈ ಕ್ಷಣವು ಬಹಳ ಅಪರೂಪದ್ದಾಗಿತ್ತು. ಭಾರತ್ ಆಸ್ಪತ್ರೆಯು ಹೇಗೆ ರೋಗಿಗಳನ್ನು ಅವರ ಕುಟುಂಬವರನ್ನು ಕಾಣುತ್ತದೆ ಎಂಬುದರ ಪ್ರತೀಕವಾಗಿತ್ತು. ಈ ಪ್ರಶಸ್ತಿಯು ಡಾ.ಬಿ.ಎಸ್. ಅಜಯ್‌ಕುಮಾರ್ ಅವರ ದಶಕಗಳ ಉತ್ಸಾಹ, ನಾಯಕತ್ವ ಮತ್ತು ದೂರದೃಷ್ಟಿಯ ಪ್ರತಿಬಿಂಬವಾಗಿದೆ. ರೋಗಿಗಳ ಆರೈಕೆ, ಸಂಶೋಧನೆ ಮತ್ತು ಕಾರ್ಯಾಚರಣೆಯ ಶ್ರೇಷ್ಠತೆಯಲ್ಲಿ ಹೊಸ ಎತ್ತರವನ್ನು ತಲುಪಲು ಪ್ರೇರೇಪಿಸುತ್ತದೆ.