Friday, November 7, 2025
Google search engine

Homeಅಪರಾಧರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ಸಿದ್ಧತೆ

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ಸಿದ್ಧತೆ

 ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಕೊನೆಯ ಹಂತ ತಲುಪಿದೆ. ಕಳೆದ 6 ತಿಂಗಳಿಂದ ತನಿಖೆ ನಡೆಸುತ್ತಾ ಇದ್ದ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ. 123 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಾಟ ಮಾಡಿರೋದು ಪ್ರಕರಣದ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಈಗಾಗಲೇ 5 ಜನ ಆರೋಪಿಗಳಿಗೂ ಕೂಡ ಶೋಕಾಸ್ ನೋಟಿಸ್ ನೀಡಿದ್ದ ಡಿಆರ್‌ಐ ಕೇವಲ ರನ್ಯಾ ರಾವ್ 102 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮ ಮಾಡಿದ್ದಾರೆ ಅನ್ನೋದು ಸ್ಪಷ್ಟವಾಗಿ ತನಿಖೆಯಲ್ಲಿ ಅನಾವರಣ ಆಗಿದೆ.

ಇನ್ನುಳಿದ ನಾಲ್ವರು ಆರೋಪಿಗಳಿಗೂ ಕೂಡ ಪ್ರತ್ಯೇಕ ಶೋಕಾಸ್ ನೋಟಿಸ್ ನೀಡಲಾಗಿತ್ತು. ಈಗ ಪ್ರಕರಣ ಕೊನೆಯ ಹಂತಕ್ಕೆ ತಲುಪಿದ್ದು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲು ತಯಾರಿ ನಡೆದಿದೆ.

ಇದರಲ್ಲಿ ಮಲತಂದೆ ರಾಮಚಂದ್ರರಾವ್ ಅವರ ಕಾರು ದುರ್ಬಳಕೆ, ರಾಜಕಾರಣಿಗಳ ಹೆಸರು ದುರ್ಬಳಕೆ ಎಲ್ಲಾ ಮಾಹಿತಿಯೂ ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular