ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿ ಸೇರಿದಂತೆ ಮೀರತ್ ಮತ್ತು ಶಾಮ್ಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಿಗ್ಗೆ 9.04ರ ಸಮಯದಲ್ಲಿ ಭೂಮಿ ಕಂಪಿಸಿದ್ದು, ಜನರು ಭಯದಿಂದ ಮನೆಗಳಿಂದ ಹೊರಬಂದಿದ್ದಾರೆ.
ಭೂಕಂಪನಶಾಸ್ತ್ರ ಕೇಂದ್ರದ ಪ್ರಕಾರ ಕೇಂದ್ರಬಿಂದು ಹರ್ಯಾಣದ ಜಜ್ಜರ್‌ನಲ್ಲಿ, 10 ಕಿಮೀ ಆಳದಲ್ಲಿ ದಾಖಲಾಗಿದೆ.