Thursday, July 10, 2025
Google search engine

Homeಅಪರಾಧಕಾನೂನುಬೆಟ್ಟಿಂಗ್ ಆ್ಯಪ್ ಹಗರಣದಲ್ಲಿ ನಟಿ ಪ್ರಣೀತಾ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿದಂತೆ 29 ಸೆಲೆಬ್ರಿಟಿಗಳಿಗೆ...

ಬೆಟ್ಟಿಂಗ್ ಆ್ಯಪ್ ಹಗರಣದಲ್ಲಿ ನಟಿ ಪ್ರಣೀತಾ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿದಂತೆ 29 ಸೆಲೆಬ್ರಿಟಿಗಳಿಗೆ ಇಡಿ ಕೇಸ್

ಹೈದರಾಬಾದ್: ಹೈದರಾಬಾದ್‌ನಲ್ಲಿ ಬೆಟ್ಟಿಂಗ್ ಆ್ಯಪ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ನಟಿ ಪ್ರಣೀತಾ ಸುಭಾಷ್, ಬಹುಭಾಷಾ ನಟ ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿ 29 ಸೆಲೆಬ್ರಿಟಿಗಳ ವಿರುದ್ಧ ಜಾರಿ ನಿರ್ದೇಶನಾಲಯ (ED)_money laundering ಪ್ರಕರಣ ದಾಖಲಿಸಿದೆ.

ಇದರಲ್ಲಿ ನಟ-ನಟಿಯರು ಮಾತ್ರವಲ್ಲದೆ, ಯೂಟ್ಯೂಬರ್, ಇನ್ಫ್ಲುಯನ್ಸರ್‌ಗಳೂ ಸೇರಿದ್ದಾರೆ. ಈ ಜನರು ಜಂಗಲ್ ರಮ್ಮಿ, ಜೀತ್ವಿನ್, ಲೋಟಸ್-365 ಮುಂತಾದ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳಿಗೆ ಪ್ರಚಾರ ಮಾಡಿ, ಅಕ್ರಮವಾಗಿ ಕೋಟ್ಯಂತರ ರೂಪಾಯಿ ಹಣ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ED ದಾಖಲಿಸಿಕೊಂಡಿರುವ ದೂರಿನಲ್ಲಿ ಮೂವರು ಸ್ಟಾರ್‌ ನಟರೊಂದಿಗೆ 29 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ಮಂಚು ಲಕ್ಷ್ಮಿ, ಪ್ರಣಿತಾ ಸುಭಾಷ್, ನಿಧಿ ಅಗರ್ವಾಲ್, ಅನನ್ಯ ನಾಗಲ್ಲ, ಸಿರಿ ಹನುಮಂತ್, ಶ್ರೀಮುಖಿ, ವರ್ಷಿಣಿ ಸೌಂದರರಾಜನ್, ವಸಂತಿ ಕೃಷ್ಣನ್, ಶೋಭಾ ಶೆಟ್ಟಿ, ಅಮೃತಾ ಚೌಧರಿ, ನಯನಿ ಪಾವನಿ, ನೇಹಾ ಪಠಾಣ್, ಪಾಂಡು, ಪದ್ಮಾವತಿ, ಇಮ್ರಾನ್ ಖಾನ್, ವಿಷ್ಣು ಪ್ರಿಯಾ, ಹರ್ಷ ಸಾಯಿ, ಭಯ್ಯಾ ಸನ್ನಿ ಯಾದವ್, ಶ್ಯಾಮಲಾ, ಟೇಸ್ಟಿ ತೇಜಾ, ರೀತು ಚೌಧರಿ, ಬಂದಾರು ಶೇಷಾಯನಿ ಸುಪ್ರೀತ, ಬೆಟ್ಟಿಂಗ್ ವೇದಿಕೆಗಳ ನಿರ್ವಾಹಕರು, ಕಿರಣ್ ಗೌಡ್, ಸೋಷಿಯಲ್‌ ಮೀಡಿಯಾ ಸ್ಟಾರ್‌ ಅಜಯ್, ಸನ್ನಿ ಮತ್ತು ಸುಧೀರ್‌ ಹಾಗೂ ‘ಲೋಕಲ್ ಬಾಯ್ ನಾನಿ’ ಯೂಟ್ಯೂಬ್ ಚಾನೆಲ್‌ ವಿರುದ್ಧ ಕೇಸ್‌ ದಾಖಲಾಗಿದೆ.

ಐದು ರಾಜ್ಯಗಳಲ್ಲಿ ದಾಖಲಾಗಿದ್ದ ಎಫ್ಐಆರ್‌ಗಳ ಆಧಾರದ ಮೇಲೆ ಈ ಕ್ರಮ ಕೈಗೊಂಡಿರುವ ಇಡಿ, ಮುಂದಿನ ಹಂತದಲ್ಲಿ ಈ ಸೆಲೆಬ್ರಿಟಿಗಳ ವಿವರಣೆಗಳನ್ನು ದಾಖಲಿಸಲು ಮುಂದಾಗಲಿದೆ. ಈಗಾಗಲೇ ಕೆಲವರನ್ನು ವಿಚಾರಣೆಗಾಗಿ ಕರೆಸಲಾಗಿದ್ದು, ಅಕ್ರಮ ಹಣ ಸಂಗ್ರಹಿಸಿದ ಮೊತ್ತವನ್ನು ಪತ್ತೆಹಚ್ಚಲು ತನಿಖೆ ಮುಂದುವರೆದಿದೆ.

ಇದು ಟಾಲಿವುಡ್ ಹಾಗೂ ಇಡೀ ದಕ್ಷಿಣ ಭಾರತದ ಚಿತ್ರರಂಗದ ಮೇಲೆ ತೀವ್ರ ಸಂಚಲನ ಎಬ್ಬಿಸಿರುವ ಘಟನೆ.

RELATED ARTICLES
- Advertisment -
Google search engine

Most Popular