Monday, November 3, 2025
Google search engine

Homeರಾಜಕೀಯಚುನಾವಣಾ ಆಯುಕ್ತ ರಾಜಕೀಯ ಪುಢಾರಿ: ವಿವಾದಾತ್ಮಕ ಹೇಳಿಕೆ ನೀಡಿದ ಡಾ.ಯತೀಂದ್ರ ಸಿದ್ದರಾಮಯ್ಯ

ಚುನಾವಣಾ ಆಯುಕ್ತ ರಾಜಕೀಯ ಪುಢಾರಿ: ವಿವಾದಾತ್ಮಕ ಹೇಳಿಕೆ ನೀಡಿದ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ಉತ್ತರಾಧಿಕಾರಿ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಯತೀಂದ್ರ ಸಿದ್ದರಾಮಯ್ಯ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವೋಟ್ ಚೋರಿ ಸಹಿ ಸಂಗ್ರಹ ಸಭೆಯಲ್ಲಿ ಮತಗಳ್ಳತನ ವಿರುದ್ಧ ಮಾತನಾಡುವಾಗ ಕೇಂದ್ರ ಚುನಾವಣಾ ಆಯುಕ್ತರನ್ನು ರಾಜಕೀಯ ಪುಢಾರಿ ಎಂದು ಹೊಸ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ನಡೆದ ವೋಟ್ ಚೋರಿ ಸಹಿ ಸಂಗ್ರಹ ಸಭೆಯಲ್ಲಿ ಈ ವಿವಾದಾತ್ಮಕ ಭಾಷಣ ಮಾಡಿದ್ದಾರೆ. ಕೇಂದ್ರ ಚುನಾವಣಾ ಆಯುಕ್ತ ಒಬ್ಬ ರಾಜಕೀಯ ಪುಢಾರಿ. ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ ರೀತಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಸಾಕ್ಷಿ ಸಮೇತ ದೂರು ಕೊಟ್ಟಿದ್ದಾರೆ. ಆದರೆ ದೂರು ಕೊಟ್ಟವರ ಮೇಲೆಯೇ ಚುನಾವಣಾ ಆಯುಕ್ತರು ಮಾತನಾಡುತ್ತಿದ್ದಾರೆ. ಆರೋಪ ಮಾಡಿರುವವರ ಮೇಲೆಯೇ ದಾಳಿ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬಗ್ಗೆ ಟೀಕಿಸಿದ್ದಾರೆ.

RELATED ARTICLES
- Advertisment -
Google search engine

Most Popular