Saturday, May 24, 2025
Google search engine

Homeರಾಜಕೀಯಶೀಘ್ರದಲ್ಲೇ ವಿರೋಧ ಪಕ್ಷದ ನಾಯಕನ ಆಯ್ಕೆ: ಬಿ.ಎಸ್. ಯಡಿಯೂರಪ್ಪ

ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕನ ಆಯ್ಕೆ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಶೀಘ್ರದಲ್ಲೇ ಪಕ್ಷದ ವರಿಷ್ಠರು ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಿದ್ದಾರೆ. ಈ ಯಡಿಯೂರಪ್ಪ ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಮೂರು- ನಾಲ್ಕು ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಆರಂಭಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಇಲ್ಲ ಅಂತಾ, ವಿಪಕ್ಷ ವಾಗಿ ಕೆಲಸ ಗಳು ನಿಂತಿಲ್ಲ. ನಾನು ನಿಮಗೊಂದು ಮಾತು ಹೇಳುತ್ತೇನೆ, ಇವತ್ತಿಂದ ಯಡಿಯೂರಪ್ಪ ಮನೆಯಲ್ಲಿ ಕುಳಿತು ಕೊಳ್ಳುವುದಿಲ್ಲ, ನನ್ನ ಪ್ರವಾಸ ಇನ್ನೂ ಮೂರು ನಾಲ್ಕು ದಿನಗಳಲ್ಲಿ ಪ್ರಾರಂಭ ಆಗುತ್ತದೆ. ರಾಜ್ಯ ಪ್ರವಾಸ ಮಾಡಿ ಬರುವ ಲೋಕಸಭಾ ಚುನಾವಣೆ ಯಲ್ಲಿ ೨೫ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೇಣುಕಾಚಾರ್ಯ ಅವರನ್ನು ಕರೆದು ಮಾತಾಡಿದ್ದೇನೆ, ಯಾರು ಯಾವುದಕ್ಕೂ ಕಾರಣರಲ್ಲ. ನಾವೆಲ್ಲರೂ ಒಟ್ಟಾಗಿ ಪಕ್ಷ ಕಟ್ಟಿ ಬೆಳೆಸಬೇಕಿದೆ. ಅದರ ಬಗ್ಗೆ ಗಮನ ಕೊಡಬೇಕು, ಆ ದಿಕ್ಕಿನಲ್ಲಿ ನಾವು ಕೆಲಸ ಮಾಡಬೇಕಿದೆ ಎಂದು ಇದೇ ವೇಳೆ ಯಡಿಯೂರಪ್ಪ ಅವರು ತಿಳಿಸಿದರು.

RELATED ARTICLES
- Advertisment -
Google search engine

Most Popular