ಉತ್ತರ ಕನ್ನಡ : ರಾಜ್ಯದಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿ ಟೀಕಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೂ ಯಾವುದೇ ವ್ಯತ್ಯಾಸವಾಗಲ್ಲ.. ಹೋದ್ಯಾ ಪಿಶಾಚಿ ಅಂದರೆ ಬಂದ್ಯಾ ಗವಾಕ್ಷಿ ಅನ್ನೋ ರೀತಿ ಆಗಿದೆ ಎಂದು ವ್ಯಂಗ್ಯವಾಡಿದರು.
ಈಗ ಸಿದ್ದರಾಮಯ್ಯ ರಾಜೀನಾಮೆ ನೀಡಿ ಹೋಗಿದ್ದಾರೆ. ಡಿಕೆ ಶಿವಕುಮಾರ್ ಬರುತ್ತಿದ್ದಾರೆ. ಆದರೆ ಇದರಿಂದ ರಾಜ್ಯದಲ್ಲಿ ಯಾವುದೇ ರೀತಿಯ ಆಭಿವೃದ್ದಿ ಕೆಲಸಗಳು ಆಗಿಲ್ಲ ಇವರ ಆಡಳಿತದಲ್ಲಿ ಆಗೋದು ಇಲ್ಲ ಎಂದು ಆರ್.ಅಶೋಕ್ ನುಡಿದರು.



