Sunday, May 25, 2025
Google search engine

Homeರಾಜಕೀಯಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಡಿಕೆಶಿ ನೇರವಾಗಿ ಭಾಗಿಯಾದ ಬಗ್ಗೆ ಸಾಕ್ಷಿ ಇವೆ: ರಮೇಶ್ ಜಾರಕಿಹೊಳಿ‌

ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಡಿಕೆಶಿ ನೇರವಾಗಿ ಭಾಗಿಯಾದ ಬಗ್ಗೆ ಸಾಕ್ಷಿ ಇವೆ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಆಡಿಯೋ ಸುತ್ತು ಹಾಕಿಕೊಂಡಿದೆ. ಡಿಕೆಶಿ ನೇರವಾಗಿ ಭಾಗಿಯಾದ ಬಗ್ಗೆ ನನ್ನ ಬಳಿ ಸಾಕ್ಷಿ ಇವೆ. ಈ ಕೇಸ್ ನಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿರುವ ಬಗ್ಗೆ ನೇರವಾಗಿ ಸಾಕ್ಷಿಯಿದೆ. ಅವರ ಬಳಿ ಅಲ್ಲಿ ಇಲ್ಲಿ ಅಂತಾ ಸುತ್ತು ಹಾಕಿರುವುದು ಇದೆ. ನನ್ನ ಕೇಸ್ ನಲ್ಲಿ ಡಿಕೆ ಶಿವಕುಮಾರ್ ಮಾತಾಡಿದ್ದು ಇದೆ ಅದನ್ನು ಕೊಡ್ತೇನಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.

ಗೋಕಾಕನಲ್ಲಿ ಮಾತನಾಡಿದ ಅವರು, ಡಿಕೆಶಿ ನನ್ನ ಬಗ್ಗೆ ಷಡ್ಯಂತ್ರ ಮಾಡಿದ್ದು‌ ಸಾಕ್ಷ್ಯ ಇದೆ ಆದರೆ ಅದನ್ನು ಮಾಧ್ಯಮದ ಮುಂದೆ ಕೊಡಲ್ಲ. ಸಿಬಿಐಗೆ ಕೇಸ್ ಕೊಟ್ಟರೆ ಸಾಕ್ಷಿ ಕೊಡ್ತೇನಿ. ನನ್ನ ಕೇಸ್ ನಲ್ಲೂ ಎಸ್‌ಐಟಿ ವಿಶ್ವಾಸ ಇಲ್ಲಾ, ಈಗಲೂ ಎಸ್ಐಟಿ ಮೇಲೆ ವಿಶ್ವಾಸ ಇಲ್ಲ‌ಎಂದರು.

ಸಿಬಿಐಗೆ ಕೇಸ್ ಕೊಟ್ಟರೂ ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮೇಲುಸ್ತುವಾರಿ ಮಾಡಬೇಕು. ಮಹಾನ್ ನಾಯಕ ಹಣದಲ್ಲಿ ಬಹಳಷ್ಟು ಪ್ರಭಾವಿ ಇದ್ದಾರೆ. ಹಣ ಕೊಟ್ಟು ಎಲ್ಲವನ್ನೂ ಖರೀದಿ ಮಾಡಬೇಕು ಎನ್ನುವ ಸೊಕ್ಕು ಇದೆ. ದೇಶದಲ್ಲಿ ಕಾನೂನು ಉಳಿಯಬೇಕು ಅಂದ್ರೆ ಈ ಕೇಸ್ ನಲ್ಲಿ ಫಿಕ್ಸ್ ಆಗಬೇಕು. ನನ್ನ ಕೇಸ್ ನಲ್ಲಿ ಕೇವಲ ಡಿಕೆ ಶಿವಕುಮಾರ್ ಭಾಗಿಯಾಗಿಲ್ಲ. ನಮ್ಮವರೂ ಕೇಸ್ ನಲ್ಲಿ ಇದ್ದಾರೆ ಜೂನ್ 4ರ ನಂತರ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ ಎಂದರು.

ಸತತ ನಾಲ್ಕು ವರ್ಷದಿಂದ ಕೊಷನ್ ಮಾರ್ಕ್ ಇದೆ. ಇದೆಲ್ಲದಕ್ಕೂ ಜೂನ್ 4ರ ನಂತರ ಇತಿಶ್ರೀ ಹಾಡೋಣ ಎಂದರು.

ಪ್ರಜ್ವಲ್ ರೇವಣ್ಣ ಕೇಸ್ ‌ಯಾರು ಹೆಮ್ಮೆ ಪಡುವ ವಿಷಯ ಅಲ್ಲ. ಎಲ್ಲರೂ ತಲೆ ತಗ್ಗಿಸುವ ವಿಷಯ, ಬಹಳ ಕೆಟ್ಟ ಪ್ರಮಾಣದಲ್ಲಿ ಆಗಿದೆ. ರೇವಣ್ಣ ಕಾನೂನು ರೀತಿ ಹೋರಾಟ ಮಾಡಲಿ. ಕಾನೂನು ಒಂದೇ ಅದಕ್ಕೆ ಉತ್ತರ ಎಂದು ಹೇಳಿದರು.

ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರದ್ದು ಸಿಡಿ ಮುಂದೆ ಬರಬಹುದು. ಮೊದಲಿನಿಂದ ಸಿಡಿ ವಿಚಾರದ ಕುರಿತು ಪದೇ ಪದೇ ಹೇಳಿಕೊಂಡು ಬಂದಿದ್ದೆ. ಆಗ ಎಲ್ಲರೂ ನನ್ನಾ ನೆಗ್ಲೆಟ್ ಮಾಡಿ ನಗುತ್ತಾ ಕೂತಿದ್ರು. ಇವತ್ತು ಒಬ್ಬರಿಗೆ ಆಗಿದೆ ಮುಂದೆ ಸಿದ್ದರಾಮಯ್ಯಗೂ ಬರಬಹುದು, ಪರಮೇಶ್ವರ ಅವರಿಗೂ ಬರಬಹುದು. ದಯವಿಟ್ಟು ಗೃಹ ಸಚಿವರು, ಮುಖ್ಯಮಂತ್ರಿಗಳು ಪಕ್ಷಾತೀತವಾಗಿ ಇತಿಶ್ರೀ ಹಾಡಬೇಕು. ಸಿಎಂ ಅವರ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular