Wednesday, January 7, 2026
Google search engine

Homeರಾಜ್ಯಕೋಗಿಲು ಲೇಔಟ್‌ ನಲ್ಲಿ 37 ಕುಟುಂಬ ಹೊರತುಪಡಿಸಿ ಉಳಿದವರೆಲ್ಲಾ ಹೊರಗಿನವರು

ಕೋಗಿಲು ಲೇಔಟ್‌ ನಲ್ಲಿ 37 ಕುಟುಂಬ ಹೊರತುಪಡಿಸಿ ಉಳಿದವರೆಲ್ಲಾ ಹೊರಗಿನವರು

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ37 ಕುಟುಂಬಗಳನ್ನು ಹೊರತುಪಡಿಸಿ ಉಳಿದವರೆಲ್ಲ ಬೇರೆ ಕಡೆಯಿಂದ ಬಂದವರು ಎಂದು ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದ್ದು, ಈಗಾಗಲೇ ಪ್ರತಿ ಮನೆಯಿಂದ ಐದು ದಾಖಲೆಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ.

ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ, ವಿದ್ಯುತ್ ಬಿಲ್, ತಾತ್ಕಾಲಿಕ ಆದೇಶ ಪ್ರತಿ, ಪಡಿತರ ಚೀಟಿಯನ್ನು ಸಂಗ್ರಹಿಸಿದ್ದು, ಅವುಗಳ ನೈಜತೆಯನ್ನು ಜಿಬಿಎ, ಕಂದಾಯ, ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದಾರೆ.

ಈಗಾಗಲೇ ಪ್ರತಿ ಮನೆಯಿಂದ ಐದು ದಾಖಲೆಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದು, ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ, ವಿದ್ಯುತ್ ಬಿಲ್, ತಾತ್ಕಾಲಿಕ ಆದೇಶ ಪ್ರತಿ, ಪಡಿತರ ಚೀಟಿಯನ್ನು ಸಂಗ್ರಹಿಸಿದ್ದು, ಅವುಗಳ ನೈಜತೆಯನ್ನು ಜಿಬಿಎ, ಕಂದಾಯ, ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದಾರೆ.

119 ಮನೆಗಳನ್ನು ಸಮೀಕ್ಷೆ ಮಾಡಲಾಗಿದ್ದು 118 ಕುಟುಂಬಗಳಿಗೆ ಆಧಾರ್‌ ಕಾರ್ಡ್‌ ಇದೆ. 102 ಕುಟುಂಬಗಳಿಗೆ ವೋಟರ್‌ ಕಾರ್ಡ್‌ ಇದ್ದರೆ 77 ಕುಟುಂಬಗಳಿಗೆ ರೇಷನ್ ಕಾರ್ಡ್ ಇದೆ. 63 ಕುಟುಂಬಗಳಿಗೆ ಆದಾಯ ಪ್ರಮಾಣ ಪತ್ರ, 56 ಕುಟುಂಬಗಳಿಗೆ ಜಾತಿ ಪ್ರಮಾಣಪತ್ರ ನೀಡಲಾಗಿದ್ದು, 37 ಕುಟುಂಬಗಳು ಮೂಲ ಬೆಂಗಳೂರಿನವರು ಎಂಬ ತೀರ್ಮಾನಕ್ಕೆ ಬರಲಾಗಿದೆ.

ಹೀಗಾಗಿ ಆರಂಭದಲ್ಲಿ 37 ಕುಟುಂಬಗಳಿಗೆ ಮಾತ್ರ ವಸತಿ ಸೌಲಭ್ಯ ಸಿಗುವ ಸಾಧ್ಯತೆಯಿದೆ. ಇಲ್ಲಿಯೂ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಇರುವ ಕುಟುಂಬಗಳನ್ನ ಪರಿಶೀಲಿಸಿ ಮನೆ ಕೊಡಬೇಕೇ? ಬೇಡವೇ ಎಂಬ ನಿರ್ಧಾರ ಆಗಲಿದೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ಯಲಹಂಕ ಹೋಬಳಿಯ ಕೋಗಿಲು ಬಂಡೆ ಕ್ವಾರಿ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ 167 ಮನೆ ಮತ್ತು ಶೆಡ್‌ಗಳನ್ನು ನೆಲಸಮಗೊಳಿಸಲಾಗಿದ್ದು ಮನೆ ನೀಡುವಂತೆ ಕೋರಿ 250ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಮನೆ ಕಳೆದುಕೊಂಡವರ ದಾಖಲೆಗಳ ಪರಿಶೀಲನೆ ಬಳಿಕ ಅವರಲ್ಲಿ ಅರ್ಹರಿದ್ದರೆ ಬೈಯಪ್ಪನಹಳ್ಳಿಯಲ್ಲಿ ನಿರ್ಮಿಸಿರುವ ವಸತಿ ಸಮುಚ್ಚಯದಲ್ಲಿ ಮನೆ ನೀಡಲು ಸರ್ಕಾರ ತೀರ್ಮಾನಿಸಿದೆ.

RELATED ARTICLES
- Advertisment -
Google search engine

Most Popular