ಬೆಂಗಳೂರು: ಜೆಟ್‌ಲ್ಯಾಗ್ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿ ಎಲ್ಲರಿಗೂ ಬಿಗ್ ರಿಲೀಫ್ ಸಿಕ್ಕಿದೆ. ಜೆಟ್‌ಲ್ಯಾಗ್ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಲಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಈಗ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ತಡ ರಾತ್ರಿ ಪಾರ್ಟಿ ಮಾಡಿಲ್ಲ. ಆರೋಪಿಗಳು ಊಟದ ಪಾರ್ಟಿ ಮಾಡಿದ್ದರು ಎಂದು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ೮ ಜನರು ವಿಚಾರಣೆಗೆ ಹಾಜರಾಗಿ ನಾವು ಪಾರ್ಟಿ ಮಾಡಿಲ್ಲ. ಕೇವಲ ಊಟ ಮಾತ್ರ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಆಧಾರಿಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.