Saturday, August 30, 2025
Google search engine

Homeರಾಜ್ಯಸುದ್ದಿಜಾಲಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ರಾಮನಗ: 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ, ಕೆ.ಎ.ಎಸ್ ಗೆಜೆಟೆಡ್ ಪ್ರೊಬೆಷನರ್, ಗ್ರೂಪ್-ಸಿ, ಆರ್‌ಆರ್‌ಬಿ ಮತ್ತು ಎಸ್‌ಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 6ರ ವರೆಗೆ ಅವಧಿ ವಿಸ್ತರಿಸಲಾಗಿದೆ. 

ಆಸಕ್ತ ಅಭ್ಯರ್ಥಿಗಳು ಜಾಲತಾಣ https://dom.karnataka.gov.in ಅಥವಾ https://sevasindhu.karnataka.gov.in/sevasindhu/departmentservices ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖಾ ವೆಬ್‌ಸೈಟ್‌ನಲ್ಲಿ ಕಾಲಕಾಲಕ್ಕೆ ನೀಡಲಾಗುವ ಮಾಹಿತಿಯು ಅಧಿಕೃತ ಮತ್ತು ಅಂತಿಮವಾಗಿರುತ್ತದೆ. ಇಲಾಖಾ ವತಿಯಿಂದ ಯಾವುದೇ ಪತ್ರ ವ್ಯವಹಾರವನ್ನು ನಡೆಸಲಾಗುವುದಿಲ್ಲವಾದ್ದರಿಂದ ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್ ಅನ್ನು ವೀಕ್ಷಿಸಬೇಕು.

ಹೆಚ್ಚಿನ ಮಾಹಿತಿಗೆ ರಾಮನಗರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ, ಕಂದಾಯ ಭವನ, 2ನೇ ಮಹಡಿ, ಕೊಠಡಿ ಸಂಖ್ಯೆ: 308 ಅನ್ನು ಕಚೇರಿ ವೇಳೆಯಲ್ಲಿ ಖುದ್ದು ಸಂಪರ್ಕಿಸಬಹುದು ಅಥವಾ ದೂ. ಸಂಖ್ಯೆ: 080-27271104, ಮಾಹಿತಿ ಕೇಂದ್ರದ ಸಿಬ್ಬಂದಿಗಳ ದೂ. ಸಂಖ್ಯೆ 9886558821, 9880297132, 8197514161 ಅಥವಾ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ; 8277799990 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular