Monday, July 14, 2025
Google search engine

Homeರಾಜ್ಯಸುದ್ದಿಜಾಲಕಣ್ಣು ಪ್ರತಿಯೊಬ್ಬರಿಗೂ ಅತ್ಯಂತ ಪ್ರಮುಖ ಅಂಗ: ಹೆಚ್.ಎನ್. ವಿಜಯ್

ಕಣ್ಣು ಪ್ರತಿಯೊಬ್ಬರಿಗೂ ಅತ್ಯಂತ ಪ್ರಮುಖ ಅಂಗ: ಹೆಚ್.ಎನ್. ವಿಜಯ್

ಹರದನಹಳ್ಳಿ ಗ್ರಾಮದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಉದ್ಘಾಟನೆ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್‌ನಗರ: ಕಣ್ಣು ಪ್ರತಿಯೊಬ್ಬರಿಗೂ ಪ್ರಮುಖವಾದ ಅಂಗವಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ಎನ್.ವಿಜಯ್ ಹೇಳಿದರು.

ಸಾಲಿಗ್ರಾಮ ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮುಡಾ ಮಾಜಿ ಅಧ್ಯಕ್ಷ ಹೆಚ್.ಎನ್.ವಿಜಯ್ ಅವರ 51ನೇ ಜನ್ಮ ದಿನೋತ್ಸವದ ಅಂಗವಾಗಿ ಅವರ ಆಪ್ತ ಸ್ನೇಹಿತ ಕೆ.ಟಿ.ಮೋಹನ್ ಕುಮಾರ್ ನೇತೃತ್ವದಲ್ಲಿ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿನ ಜನರು ತಮ್ಮ ಬದುಕಿನ ದಿನನಿತ್ಯದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಾಗ ಕಣ್ಣಿನ ಬಗ್ಗೆ ಅತಿಹೆಚ್ಚಿನ ಜಾಗೃತಿ ವಹಿಸಬೇಕಾದ ಅಗತ್ಯತೆ ಪ್ರಮುಖವಾಗಿದೆ. ಮಕ್ಕಳು ಆಟವಾಡುವ ಸಮಯದಲ್ಲಿ ಅವರುಗಳ ಮೇಲೆ ಪೋಷಕರುಗಳು ಸದಾ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಅವಗಡಗಳು ಸಂಭವಿಸುವ ಸಾಧ್ಯತೆ ಇರುತ್ತದೆ ಎಂದರು. ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದೇ ವಿಷಯಕ್ಕೂ ಯಾರೂ ಕೂಡ ಎಂತಹ ಸಂದರ್ಭದಲ್ಲಿಯೂ ಉದಾಸೀನ ತೋರದೆ ತಕ್ಷಣವೇ ವೈದ್ಯರ ಸಲಹೆಯನ್ನು ಪಡೆದು ಆರೋಗ್ಯದ ಕಡೆಗೆ ಹೆಚ್ಚಿನ ಗಮನವನ್ನು ಹರಿಸಬೇಕು ಎಂದರು.

ಆರೋಗ್ಯಕ್ಕೆ ಸಂಬಂಧಿಸಿದಂತಹ ವಿವಿಧ ಉಚಿತ ಶಿಬಿರಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಮಾಡುವ ಮೂಲಕ ಗ್ರಾಮಾಂತರ ಪ್ರದೇಶದ ಜನರಿಗೆ ಉತ್ತಮ ಆರೋಗ್ಯ ಸೇವೆಯು ಸಿಗುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಈ ನಿಟ್ಟಿನಲ್ಲಿ ನನ್ನ ಜನ್ಮದಿನೋತ್ಸವದ ಅಂಗವಾಗಿ ನನ್ನ 40 ವರ್ಷಗಳ ಬಾಲ್ಯದ ಗೆಳೆಯ ಕೆ.ಟಿ.ಮೋಹನ್ ಕುಮಾರ್ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರವನ್ನು ನಮ್ಮ ಹುಟ್ಟೂರಿನಲ್ಲಿ ಆಯೋಜಿಸುವ ಮೂಲಕ ಉತ್ತಮ ಸಾಮಾಜಿಕ ಸೇವಾ ಕಾರ್ಯವನ್ನು ಮಾಡಿದ್ದಾರೆ. ಇವರು ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಲಿ ಅವರ ಸಾಮಾಜಿಕ ಕಾರ್ಯ ಚಟುವಟಿಕೆಗಳಿಗೆ ಸದಾ ನನ್ನ ಸಹಕಾರವಿರುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಮುಡಾ ಮಾಜಿ ಅಧ್ಯಕ್ಷ ಹೆಚ್.ಎನ್.ವಿಜಯ್ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಲ್.ವಿ.ಗೋಪಾಲ್, ಮಾಜಿ ಅಧ್ಯಕ್ಷರಾದ ಎಸ್.ಆರ್.ಮಂಜುಳಾ ರಮೇಶ್, ಪ್ರದೀಪ್, ಜಿಲ್ಲಾ ಪತ್ರ ಬರಹಗಾರ ಮಿರ್ಲೆ ರಾಜೀವ್, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಟಿ.ರಾಮೇಗೌಡ, ವೈದ್ಯಾಧಿಕಾರಿ ಡಾ.ಕಲ್ಲೇಶ್, ಶಂಕರ ಕಣ್ಣಿನ ಆಸ್ಪತ್ರೆಯ ಡಾ.ಶಿವಾನಿ, ಶ್ರೀಕಂಠ ಮೂರ್ತಿ, ಯುವ ಮುಖಂಡರುಗಳಾದ ಎಸ್.ಆರ್. ರವಿಕುಮಾರ್, ರಾಜು, ಕೃಷ್ಣೇಗೌಡ, ಮಹೇಶ್, ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ತುಳಸಿ, ಸುನೀತಾ, ಕುಸುಮ, ರಾಮು, ಚಂದ್ರಕಾಂತಿ, ಕಮಲ, ಜಮುನ, ಶ್ರೀನಿವಾಸ, ಎಸ್.ಜೆ.ಆಶಾ, ಆಶಾ ಕಾರ್ಯಕರ್ತರು ಸೇರಿದಂತೆ ಹಲವರು ಇದ್ದರು.

RELATED ARTICLES
- Advertisment -
Google search engine

Most Popular