Tuesday, May 20, 2025
Google search engine

HomeUncategorizedರಾಷ್ಟ್ರೀಯಕುಂಭಮೇಳದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: 53 ಖಾತೆಗಳ ವಿರುದ್ಧ ಕ್ರಮ

ಕುಂಭಮೇಳದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: 53 ಖಾತೆಗಳ ವಿರುದ್ಧ ಕ್ರಮ

ಲಖನೌ: ಪ್ರಯಾಗರಾಜ್‌ನಲ್ಲಿ ನಡೆದ ಮಹಾ ಕುಂಭಮೇಳದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ಉತ್ತರ ಪ್ರದೇಶ ಪೊಲೀಸರು 53 ಖಾತೆಗಳ ವಿರುದ್ಧ ಕಾನೂನು ಕ್ರಮ ಕೈಕೊಂಡಿದ್ದಾರೆ.

ನಕಲಿ ಸುದ್ದಿ ಹರಡುವುದನ್ನು ತಡೆಯುವಂತೆ ಸಿಎಂ ಯೋಗಿ ಆದಿತ್ಯನಾಥ ಅವರು ನೀಡಿದ್ದ ನಿರ್ದೇಶನದ ಮೇರೆಗೆ ಈ ಕ್ರಮ ಜರುಗಿಸಲಾಗಿದೆ. ಕಿಡಿಗೇಡಿಗಳು, ಕುಂಭ ಮೇಳಕ್ಕೆ ಸಂಬಂಧ ಕಲ್ಪಿಸಿ ಹಳೆಯ ವಿಡಿಯೊಗಳು, ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಜನರ ದಿಕ್ಕು ತಪ್ಪಿಸುವ ಯತ್ನ ನಡೆಸಿದ್ದನ್ನು ಪತ್ತೆ ಹಚ್ಚಲಾಗಿದೆ. ಈ ಪೋಸ್ಟ್‌ಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಅಂತಹವುಗಳಿಗೆ ಕಡಿವಾಣ ಹಾಕಲು ರಾಜ್ಯ ಪೊಲೀಸ್ ಹಾಗೂ ತಜ್ಞರನ್ನೊಳಗೊಂಡ ಏಜೆನ್ಸಿಗಳು ನಿರಂತರವಾಗಿ ಕೆಲಸ ಮಾಡುತ್ತಿದ್ದು, ಸಮಗ್ರ ಕಾರ್ಯತಂತ್ರಗಳನ್ನು ರೂಪಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈಜಿಪ್ಟ್ ನ ಕೈರೋದಲ್ಲಿ 2020ರ ಜುಲೈನಲ್ಲಿ ಸಂಭವಿಸಿದ ಅಗ್ನಿ ದುರಂತದ ವಿಡಿಯೊವನ್ನು ಹಂಚಿಕೊಳ್ಳುವ ಮೂಲಕ, ಮಹಾ ಕುಂಭಮೇಳದಲ್ಲಿ ಅನಾಹುತ ಸಂಭವಿಸಿದೆ. 40-50 ಕಾರುಗಳು ಆಹುತಿಯಾಗಿವೆ ಎಂಬುದಾಗಿ ಆತಂಕ ಸೃಷ್ಟಿಸಲಾಗಿತ್ತು. ಹಾಗೆಯೇ, ರಾಷ್ಟ್ರೀಯವಾದಿಗಳು ಹಾಗೂ ಧಾರ್ಮಿಕ ಮುಖಂಡರು ಸೇನಾ ಸಿಬ್ಬಂದಿಯ ಮೇಲೆ ಪಾದರಕ್ಷೆಗಳನ್ನು ಎಸೆದಿದ್ದಾರೆ ಎಂದು ಉಲ್ಲೇಖಿಸಿ ಮತ್ತೊಂದು ವಿಡಿಯೊವನ್ನು ಹಂಚಿಕೊಳ್ಳಲಾಗಿತ್ತು. ಆದರೆ, ಅದು ‘ಪುಷ್ಪಾ 2’ ಸಿನಿಮಾ ಪ್ರಚಾರ ಕಾರ್ಯಕ್ರಮದ್ದು. ಈ ರೀತಿ ಸುಳ್ಳು ಸುದ್ದಿಗಳನ್ನು ಹರಡಿ, ಶಾಂತಿ ಕದಡಲು ಯತ್ನಿಸಿದ ಆರೋಪದಲ್ಲಿ ಕಳೆದ ಒಂದು ತಿಂಗಳಿನಿಂದ ಸಾಮಾಜಿಕ ಮಾಧ್ಯಮಗಳ 53 ಖಾತೆಗಳ ವಿರುದ್ಧ ಕಾನೂನು ಕ್ರಮ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular