ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ಗುಂಡಿಕ್ಕಿ ಕೊಂದು ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ.
ಪತಿ ಹರೀಶ್ (50) ಪತ್ನಿ ಜಾಜಿ (45) ಮೃತಪಟ್ಟವರು.ದಂಪತಿ ಪ್ರತಿದಿನ ಒಂದಲ್ಲ ಒಂದು ಕಾರಣಕ್ಕೆ ಜಗಳವಾಡುತ್ತಿದ್ದರು. ಸೋಮವಾರ (ಜೂ.17) ರಾತ್ರಿಯೂ ಮನೆಯಲ್ಲಿ ದಂಪತಿ ನಡುವೆ ಗಲಾಟೆಯಾಗಿದೆ.
ಕಲಹ ವಿಕೋಪಕ್ಕೆ ತಿರುಗಿದೆ, ಬಳಿಕ ಹರೀಶ್ ಪತ್ನಿ ಜಾಜಿಗೆ ನಾಡ ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ನಂತರ ಹರೀಶ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.