ರಾಮನಗರ: ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 53 ವರ್ಷದ ಕಾಂತರಾಜು ಎಂಬ ರೈತ ಮೃತ ಪಟ್ಟಿದ್ದಾರೆ . ಕಳೆದ ಏ.19ರಂದು ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಬಳಿ, ಕಾಡಾನೆಯನ್ನು ವಾಪಸ್ ಕಾಡಿಗಟ್ಟುವ ಕಾರ್ಯಾಚರಣೆ ನಾಡೆಯುತ್ತಿತ್ತು. ಈ ವೇಳೆ ರೈತರ ಮೇಲೆ ಕಾಡಾನೆ ದಾಳಿ ಮಾಡಿತ್ತು. ಜಮೀನಿನಲ್ಲಿದ್ದ ರೈತನ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯ ಮಾಡಿ ತೀವ್ರ ರಕ್ತಸ್ರಾವ ಉಂಟಾಗಿತ್ತು. ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ರೈತ ಕಾಂತರಾಜುಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ರೈತ ಸಾವನ್ನಪ್ಪಿದ್ದಾರೆ
ಅರಣ್ಯ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಚನ್ನಪಟ್ಟಣ ಭಾಗದಲ್ಲಿನ ಕಾಡಾನೆ ಹಾವಳಿಗೆ ಬ್ರೇಕ್ ಹಾಕುವಂತೆ ಒತ್ತಾಯ ಮಾಡಿದ್ದಾರೆ.



