Saturday, July 26, 2025
Google search engine

Homeಅಪರಾಧಸುಳ್ಯ ಸಮೀಪ ದೇವರಕೊಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಯುವಕರು ದುರ್ಮರಣ

ಸುಳ್ಯ ಸಮೀಪ ದೇವರಕೊಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಯುವಕರು ದುರ್ಮರಣ

ಮಂಗಳೂರು (ದಕ್ಷಿಣ ಕನ್ನಡ) : ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ದೇವರಕೊಲ್ಲಿ ಹೆದ್ದಾರಿಯ ಕೊಯನಾಡು ಎಂಬಲ್ಲಿ ಇಂದು ನಡೆದಿದೆ. ನಿಹಾದ್, ರಿಸ್ವಾನ್, ರಾಶಿಬ್ ಮತ್ತು ರಿಶು ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಘಟನೆಯ ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತದೇಹಗಳನ್ನು ಸುಳ್ಯದ ಆಸ್ಪತ್ರೆಗೆ ತರಲಾಗಿದ್ದು, ಪ್ರಕ್ರಿಯೆಗಳು ನಡೆಯುತ್ತಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮಾಹಿತಿ ಪಡೆಯುತ್ತಿದ್ದಾರೆ.

RELATED ARTICLES
- Advertisment -
Google search engine

Most Popular