ಮುಂಬೈ: ರೈಲು ಬರುತ್ತಿದ್ದಂತೆ ರೈಲ್ವೆ ಹಳಿಗೆ ತಲೆಕೊಟ್ಟು ತಂದೆ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಭೀಕರ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮುಂಬೈನ ಪಾಲ್ಘರ್ ಜಿಲ್ಲೆಯ ಭಾಯಂದರ್ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ರೈಲು ಬರುತ್ತಿದ್ದಂತೆ ತಂದೆ ಮಗ ಇಬ್ಬರು ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜುಲೈ 09 ರಂದು ಈ ಹೃದಯವಿದ್ರಾವಕ ಘಟನೆ ನಡೆದಿದ್ದು, ಭಾಯಂದರ್ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ನಂ.6 ರ ಮುಂಭಾಗದಲ್ಲಿ ಇರುವಂತಹ ಹಳಿಗೆ ತಲೆಕೊಟ್ಟು ತಂದೆ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ದೃಶ್ಯ ಅಲ್ಲೇ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವರದಿಗಳ ಪ್ರಕಾರ ವಸಾಯಿಯ ನಿವಾಸಿಗಳಾದ ತಂದೆ ಹರೀಶ್ ಮೆಹ್ತಾ (60) ಮತ್ತು ಮಗ ಜೈ ಮೆಹ್ತಾ (30) ವಿರಾರ್‌ನಿಂದ ಚರ್ಚ್‌ಗೇಟ್‌ಗೆ ಹೋಗುತ್ತಿದ್ದ ಲೋಕಲ್ ಟ್ರೈನ್‌ಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡವರು. ಈ ಇಬ್ಬರ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ತಂದೆ ಮಗನ ಆತ್ಮಹತ್ಯೆಯ ನಿಖರವಾದ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ.
ಈ ಕುರಿತ ಪೋಸ್ಟ್ ಒಂದನ್ನು LoksattaLive ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ವೈರಲ್ ವಿಡಿಯೋದಲ್ಲಿ ರೈಲ್ವೆ ಫ್ಲಾಟ್‌ಫಾರ್ಮ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ತಂದೆ ಮಗ ಸೀದಾ ರೈಲ್ವೆ ಹಳಿಗೆ ಜಿಗಿದು, ಅತ್ತ ಕಡೆಯಿಂದ ರೈಲು ಬರುತ್ತಿರುವುದನ್ನು ಕಂಡು ಇಬ್ಬರೂ ಕೈ ಕೈ ಹಿಡಿದುಕೊಂಡು ಹೋಗಿ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ದೃಶ್ಯವನ್ನು ಕಾಣಬಹುದು.