Thursday, May 22, 2025
Google search engine

Homeರಾಜ್ಯಫೆ. 16ರಂದು ಗ್ರಾಮೀಣ ಭಾರತ ಬಂದ್

ಫೆ. 16ರಂದು ಗ್ರಾಮೀಣ ಭಾರತ ಬಂದ್

ಹೊಸದಿಲ್ಲಿ : ದಿಲ್ಲಿ ಚಲೋ ಕಾರ್ಯಕ್ರಮದ ನಡುವೆಯೇ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಕೇಂದ್ರ ಕಾರ್ಮಿಕ ಸಂಘಟನೆಗಳೊಂದಿಗೆ ಫೆ. ೧೬ರಂದು ಗ್ರಾಮೀಣ ಭಾರತ ಬಂದ್‌ಗೆ ಕರೆ ನೀಡಿದೆ.

ಫೆ.೧೬ರಂದು ಬೆಳಗ್ಗೆ ೬ರಿಂದ ಸಂಜೆ ೪ಗಂಟೆಯವರೆಗೆ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಬಂದ್ ಆಚರಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮಧ್ಯಾಹ್ನ ೧೨ ರಿಂದ ಸಂಜೆ ೪ ಗಂಟೆಯವರೆಗೆ ದೇಶದ ಪ್ರಮುಖ ರಸ್ತೆಗಳಲ್ಲಿ ರೈತರು ವ್ಯಾಪಕ ಪ್ರತಿಭಟನೆ ನಡೆಸಲಿದ್ದಾರೆ.

ಪಂಜಾಬ್‌ನಲ್ಲಿ ಪ್ರತಿಭಟನೆಯ ಸಮಯದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಪ್ರಮುಖ ಭಾಗಗಳನ್ನು ನಾಲ್ಕು ಗಂಟೆಗಳ ಕಾಲ ಮುಚ್ಚಲು ನಿರ್ಧರಿಸಲಾಗಿದೆ. ಶನಿವಾರ ಲೂಧಿಯಾನದಲ್ಲಿ ಕರೆದಿದ್ದ ರೈತರ ಸಭೆಯಲ್ಲಿ, ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಲಖೋವಲ್‌ನ ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಖೋವಾಲ್ ಅವರು ಗ್ರಾಮೀಣ ಭಾರತ್ ಬಂದ್‌ಗೆ ಸಂಬಂಧಿಸಿದ ಕಾರ್ಯತಂತ್ರವನ್ನು ಅನಾವರಣಗೊಳಿಸಿದ್ದಾರೆ.

ಎಸ್‌ಕೆಎಂ ರಾಷ್ಟ್ರೀಯ ಸಮನ್ವಯ ಸಮಿತಿ (ಎನ್‌ಸಿಸಿ) ಸದಸ್ಯ ಡಾ ದರ್ಶನ್ ಪಾಲ್ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡುತ್ತಾ, ಡಿಸೆಂಬರ್‌ನಲ್ಲಿಯೇ ಗ್ರಾಮೀಣ ಭಾರತ್ ಬಂದ್ ಯೋಜನೆ ರೂಪಿಸಲಾಗಿತ್ತು. ಬಂದ್ ದಿನ ಕೃಷಿ ಚಟುವಟಿಕೆಗಳು, ನರೇಗಾ ಕೆಲಸ ಸೇರಿದಂತೆ ಗ್ರಾಮೀಣ ಭಾಗದ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸಲಾಗುವುದು. ಯಾವುದೇ ರೈತರು, ಕೃಷಿ ಕಾರ್ಮಿಕರು ಅಥವಾ ಗ್ರಾಮೀಣ ಕಾರ್ಮಿಕರು ಕೆಲಸ ಮಾಡುವುದಿಲ್ಲ. ಆಂಬ್ಯುಲೆನ್ಸ್‌ಗಳು, ಮರಣ, ಮದುವೆ, ಮೆಡಿಕಲ್ ಶಾಪ್‌ಗಳು, ವಾರ್ತಾಪತ್ರಿಕೆ ಪೂರೈಕೆ, ಬೋರ್ಡ್ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಮತ್ತು ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರ ತುರ್ತು ಸೇವೆಗಳಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದಿದ್ದಾರೆ.

ತರಕಾರಿ ಮತ್ತು ಇತರ ಬೆಳೆಗಳ ವ್ಯಾಪಾರ ಮತ್ತು ಸಂಗ್ರಹಣೆಯನ್ನು ಸ್ಥಗಿತಗೊಳಿಸಲಾಗುವುದು. ಗ್ರಾಮೀಣ ಪ್ರದೇಶದ ಅಂಗಡಿಗಳು, ಧಾನ್ಯ ಮಾರುಕಟ್ಟೆಗಳು, ತರಕಾರಿ ಮಾರುಕಟ್ಟೆಗಳು, ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಗಳು, ಗ್ರಾಮೀಣ ಕೈಗಾರಿಕೆ ಮತ್ತು ಸೇವಾ ವಲಯದ ಸಂಸ್ಥೆಗಳು ಮತ್ತು ಖಾಸಗಿ ವಲಯದ ಉದ್ಯಮಗಳನ್ನು ಮುಚ್ಚುವಂತೆ ಒತ್ತಾಯಿಸಲಾಗಿದೆ. ಹೆಚ್ಚುವರಿಯಾಗಿ, ಮುಷ್ಕರದ ಅವಧಿಯಲ್ಲಿ ಹಳ್ಳಿಗಳ ಅಕ್ಕಪಕ್ಕದ ಪಟ್ಟಣಗಳಲ್ಲಿನ ಅಂಗಡಿಗಳು ಮತ್ತು ವ್ಯಾಪಾರಗಳು ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular