Tuesday, September 30, 2025
Google search engine

Homeಅಪರಾಧಮಹಿಳೆಯ ಖಾಸಗಿ ವಿಡಿಯೋ ಹಿಡಿದು ಬ್ಲ್ಯಾಕ್‌ ಮೇಲ್‌: ಇಬ್ಬರ ವಿರುದ್ಧ FIR

ಮಹಿಳೆಯ ಖಾಸಗಿ ವಿಡಿಯೋ ಹಿಡಿದು ಬ್ಲ್ಯಾಕ್‌ ಮೇಲ್‌: ಇಬ್ಬರ ವಿರುದ್ಧ FIR

ಬೆಂಗಳೂರು : ಮಹಿಳೆಯೊಬ್ಬರ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮಾಡುತ್ತಿರುವ ಆರೋಪದ ಹಿನ್ನೆಲೆ ಇದೀಗ ಇಬ್ಬರ ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ರೌಡಿ ಅರಸಯ್ಯನ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿರುವ ಶೂಟ್ ಗಿರಿ ಹಾಗೂ ಸ್ವರೂಪ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. 2022ರಲ್ಲಿ ಸ್ವರೂಪ್ ಎಂಬಾತನಿಗೆ ಫೇಸ್‌ಬುಕ್‌ನಲ್ಲಿ ಮಹಿಳೆ ಪರಿಚಯವಾಗಿದ್ದಳು. ನಂತರ ಮಹಿಳೆ ಬಳಿ ಸ್ವರೂಪ್, ಕಷ್ಟ ಎಂದು ಹೇಳಿಕೊಂಡು, 4 ಲಕ್ಷ ರೂ. ಹಣ ಪಡೆದಿದ್ದ. ಮಹಿಳೆ ಹಣ ವಾಪಸ್ ಕೇಳಿದಾಗ ಆಕೆಯ ಖಾಸಗಿ ವೀಡಿಯೋ ಹಾಗೂ ಫೋಟೋ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ.

ನೊಂದ ಮಹಿಳೆ ಪೊಲೀಸ್‌ ಠಾಣೆಗೆ ದೂರು ಕೊಡಲು ಮುಂದಾದಾಗ ಶೂಟ್ ಗಿರಿ ಹಣ ಕೊಡುವುದಾಗಿ ಮಹಿಳೆಯನ್ನು ತಡೆದಿದ್ದ. ಬಳಿಕ ಹಣ ಕೊಡದೇ, ಸ್ವರೂಪ್‌ ನಮ್ಮ ಹುಡುಗ ಅವನ ತಂಟೆಗೆ ಬಂದ್ರೆ ಸರಿ ಇರಲ್ಲ ಎಂದು ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಅಲ್ಲದೇ ವೀಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular