Monday, January 26, 2026
Google search engine

Homeರಾಜಕೀಯಶಾಸಕ ಎಸ್.ಸುರೇಶ್ ಕುಮಾರ್ ವಿರುದ್ಧ ಎಫ್‌ಐಆರ್‌ ದಾಖಲು

ಶಾಸಕ ಎಸ್.ಸುರೇಶ್ ಕುಮಾರ್ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು‌ : ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ವಿರುದ್ಧ ಶಾಸಕ ಎಸ್.ಸುರೇಶ್ ಕುಮಾರ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಪ್ರಕರಣದ ಸಂಬಂಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಮುಖ್ಯಸ್ಥರಾದ ಜಿ.ಪ್ರಕಾಶ್‌ ಮತ್ತು ಮನೋಹರ್‌ ನೇತೃತ್ವದ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದೆ.

ಇನ್ನೂ ಮಹಿಳೆಯರಿಗೆ ಅವಮಾನ ಮಾಡಿದ ಶಾಸಕರು ಕ್ಷಮೆಯಾಚಿಸಲಿ ಎಂಬ ಘೋಷಣೆಗಳುಳ್ಳ ಪೋಸ್ಟರ್‌ಗಳನ್ನು ಅಂಟಿಸುವ ಕಾಂಗ್ರೆಸ್‌ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದ್ದು, ಬಳಿಕ ಈ ಸಂಬಂಧ ದೂರು ಕೊಡಲು ಬಸವೇಶ್ವರ ನಗರ ಠಾಣೆಗೆ ದೂರು ಕೊಡಲು ಹೋಗಿದ್ದರು. ಆದರೆ ಈ ಘಟನೆ ವಿಧಾನಸೌಧ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹಾಗಾಗಿ ಅಲ್ಲಿಗೆ ತೆರಳಿ ದೂರು ನೀಡಲು ಅಧಿಕಾರಿಗಳು ಸೂಚನೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಭಾನುವಾರ ಕಾಂಗ್ರೆಸ್‌ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ನಿಂದನೆ ಹೇಳಿಕೆ ನೀಡಿರುವ ಶಾಸಕ ಸುರೇಶ್‌ ಕುಮಾರ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular