Thursday, June 19, 2025
Google search engine

Homeರಾಜ್ಯಸುದ್ದಿಜಾಲಮಹದೇಶ್ವರ ಬೆಟ್ಟದಲ್ಲಿ ಭಕ್ತರ ಮೇಲೆ ಕಾಡಾನೆ ದಾಳಿ: ಮಹಿಳೆ ಸಾವು

ಮಹದೇಶ್ವರ ಬೆಟ್ಟದಲ್ಲಿ ಭಕ್ತರ ಮೇಲೆ ಕಾಡಾನೆ ದಾಳಿ: ಮಹಿಳೆ ಸಾವು

ಮಹದೇಶ್ವರ ಬೆಟ್ಟ (ಚಾಮರಾಜನಗರ): ಹನೂರು ತಾಲ್ಲೂಕಿನ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಮಂಗಳವಾರ ಸಂಜೆ ಕಾಲ್ನಡಿಗೆಯಲ್ಲಿ ಬರುತ್ತಿದ್ದ ಭಕ್ತರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲಿನ ಹೊನ್ನೇನಳ್ಳಿಯ ಲಕ್ಷ್ಮಿ (40) ಮೃತಪಟ್ಟವರು.

ಗ್ರಾಮದಿಂದ ಎಂಟು ಮಂದಿ ಬೆಟ್ಟಕ್ಕೆ ಬಂದಿದ್ದರು. ಈ ಪೈಕಿ ಲಕ್ಷ್ಮಿ, ಪದ್ಮಮ್ಮ, ಪುಟ್ಟರಾಜು ಅವರು ಕಾಲ್ನಡಿಗೆಯಲ್ಲಿ ಬರುತ್ತಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಆನೆ ತಲೆದಿಂಬ ಸಮೀಪ ಕಾಡಾನೆ ಹಠಾತ್ ದಾಳಿ ಮಾಡಿದೆ. ಆನೆ ತುಳಿತಕ್ಕೆ ಒಳಗಾದ ಲಕ್ಷ್ಮಿ ಅವರು ಸ್ಥಳದಲ್ಲೇ ಮೃತಪಟ್ಟರು.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

RELATED ARTICLES
- Advertisment -
Google search engine

Most Popular