Sunday, May 25, 2025
Google search engine

Homeರಾಜಕೀಯರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಚಿವ ಮುನಿರತ್ನ

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಚಿವ ಮುನಿರತ್ನ

ತುಮಕೂರು: ಕಾಂಗ್ರೆಸ್‌ ನವರು ಕೇಂದ್ರ ಸರ್ಕಾರ ಹಣ ಕೊಟ್ಟಿಲ್ಲ ಎಂದು ಚುನಾವಣಾಗೋಸ್ಕರ ನಾಟಕ ಮಾಡ್ತಾ ಇದ್ದಾರೆ. 52,000 ಕೋಟಿಯನ್ನ ಗ್ಯಾರಂಟಿಗಳ ರೂಪದಲ್ಲಿ  ಸಾರ್ವಜನಿಕ ತೆರಿಗೆ ಹಣವನ್ನು ಕೊಟ್ಟು ಪೋಲು ಮಾಡಿದ್ದಾರೆ.  ಈಗ ಪದೇಪದೇ ಹಣ ಕೇಳಿಕೊಂಡು ಇವರು ಕೇಂದ್ರಕ್ಕೆ ಹೋಗ್ತಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಚಿವ ಮುನಿರತ್ನ ಹರಿಹಾಯ್ದಿದ್ದಾರೆ.

ತುಮಕೂರಿನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮುನಿರತ್ನ ಅವರು, ತೆರಿಗೆ ಹಣವನ್ನು ದಾನ ಮಾಡೋ ಮುಂಚೆ ಯೋಚನೆ ಮಾಡಬೇಕಿತ್ತು.  ಗ್ಯಾರೆಂಟಿ ಯೋಜನೆ ಘೋಷಣೆ ಮಾಡೋ ಮುಂಚೆ ಯೋಚನೆ ಮಾಡಬೇಕಿತ್ತು. ಯಾವುದೇ ಯೋಚನೆ ಮಾಡದೆ ಅಧಿಕಾರದ ದಾಹಕ್ಕಾಗಿ ಐದು ಗ್ಯಾರಂಟಿ ಆರು ಗ್ಯಾರೆಂಟಿ ಘೋಷಣೆ ಮಾಡಿದರು. ಇಲ್ಲಿ ದಾನ ಕೊಟ್ಟು ಅಲ್ಲಿ ಭಿಕ್ಷೆ ಬೇಡಲು ಹೋಗುತ್ತಾರೆ. ಇವರು ಕೇಂದ್ರದಿಂದ ಹಣ ಕೇಳೋದು ರಾಜ್ಯದ ಅಭಿವೃದ್ಧಿಗಲ್ಲ. ಹಣತಂದು ಲೋಕಸಭಾ ಚುನಾವಣೆಗೆ ಇನ್ನಷ್ಟು ಗ್ಯಾರಂಟಿ ಕೊಡಲು ಎಂದು ಆರೋಪಿಸಿದರು.

ಚುನಾವಣೆ ಮುಗಿದ ನಂತರ ಕಾಂಗ್ರೆಸ್ ನವರು ಗ್ಯಾರಂಟಿ ನಿಲ್ಲಿಸುತ್ತಾರೆ. ಮಾಗಡಿ ಶಾಸಕ ಬಾಲಕೃಷ್ಣ ಹೇಳಿರುವುದು ಸರಿಯಾಗಿದೆ. ಶಾಸಕ ಬಾಲಕೃಷ್ಣ ಮಾತನಾಡುವಾಗ ವೇದಿಕೆ ಮೇಲೆ ಡಿಕೆ ಸುರೇಶ್ ಕೂಡ ಇದ್ದರು. ಹಾಗಾಗಿ ಮಾಗಡಿ ಬಾಲಕೃಷ್ಣರ ಮಾತಿಗೆ ಡಿಕೆ ಸುರೇಶ್ ಅವರ ಸಹಮತ ಕೂಡ ಇದೆ ಅಂತಾಯ್ತು ಎಂದರು.

ಪ್ರತ್ಯೇಕ ರಾಷ್ಟ್ರದ  ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ನವರಿಗೆ ಬಹುಶಃ ಪ್ರತ್ಯೇಕ ದೇಶ ಮಾಡೋದಕ್ಕೆ ಉತ್ತಮವಾದ ಆಲೋಚನೆ ಬಂದಿರಬೇಕು. 1947ರಲ್ಲಿ ಜಿನ್ನಾರಿಂದ ದೇಶ ವಿಭಜನೆ ಆಯಿತು. ಈಗ ಇವರೇನಾದ್ರೂ ಪಾಕಿಸ್ತಾನದಂತೆ  ಬೇರೆ ಒಂದು ಸ್ಥಾನ ಮಾಡೋಕೆ ಹೊರಟಿದ್ದಾರೆ. ದೇಶದ ಅಖಂಡತೆಯ ಕುರಿತಂತೆ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಅದನ್ನು ಬಿಟ್ಟು ಇವರು ದೇಶನ ಪ್ರತ್ಯೇಕ ಮಾಡಲ್ಲ ಹೊರಟಿದ್ದಾರೆ ಎಂದು ಕಿಡಿಕಾರಿದರು.

ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಕೊಡುವ ವಿಚಾರದಲ್ಲಿ ನಾವೆಲ್ಲ ಬೆಂಬಲವಾಗಿ ನಿಲ್ತಿವಿ. ಅಂತಹ ಮಹನೀಯರು ಮತ್ತೇ ಇಲ್ಲಿ ಹುಟ್ಟಬೇಕು. ಅವರಿಗೆ ಭಾರತ ರತ್ನ ಕೊಡುವ ವಿಚಾರದಲ್ಲಿ ನಾವೆಲ್ಲ ಒಗ್ಗಟ್ಟಾಗಿ ಇರ್ತಿವಿ ಎಂದರು.

ಅಡ್ವಾಣಿಜಿಗೆ ಭಾರತ ರತ್ನ ಲಭಿಸಿರೋದು ಬಹಳ ಸಂತೋಷ. ಅವರ ಹೋರಾಟ ಇವತ್ತಿನದಲ್ಲ. ಬಹಳಷ್ಟು ಶ್ರಮ ಪಟ್ಟ ಈ ದೇಶದಲ್ಲಿನ ಹಿಂದೂ ಧರ್ಮವನ್ನು ಕಟ್ಟಿದವರು. ಮಾಜಿ ಪ್ರಧಾನಿ ವಾಜಪೇಯಿಯವರ ಜೊತೆಯಲ್ಲಿ ಕೆಲಸ ಮಾಡಿದ್ದವರು. ಅವರಿಗೆ ಭಾರತ ರತ್ನ ಕೊಟ್ಟಿರೋದು ಸೂಕ್ತ ವ್ಯಕ್ಯಿಗೆ ಸೂಕ್ತ ಸಮಯದಲ್ಲಿ ಕೊಟ್ಟಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular