ಮಂಡ್ಯ: ಮಾಜಿ ಸಚಿವ ಹಾಗೂ ಮೇಲುಕೋಟೆ ಕ್ಷೇತ್ರದ ಮಾಜಿ ಶಾಸಕ ಪುಟ್ಟರಾಜು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಪಾಂಡವಪುರ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಪುಟ್ಟರಾಜು ಅವರ ಅಭಿಮಾನಿಗಳು ನೆಚ್ಚಿನ ನಾಯಕನ 60ನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ.

ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಮಾಜಿ ಸಚಿವ ಪುಟ್ಟರಾಜು ಕೇಕ್ ಕತ್ತರಿಸಿದ್ದಾರೆ. ಇದೇ ವೇಳೆ ಅಭಿಮಾನಿಗಳು ಬೆಳ್ಳಿ ಗದೆ ನೀಡುವ ಮೂಲಕ ಅಭಿಮಾನ ವ್ಯಕ್ತಪಡಿಸಿದ್ದಾರೆ.