Sunday, December 7, 2025
Google search engine

HomeUncategorizedಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ

ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ

ಮಂಗಳೂರು ನಗರದ್ಯಾಂತ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ 50 ಲಕ್ಷ ಮೌಲ್ಯದ ಸುಮಾರು 517.76 ಗ್ರಾಂ ಎಂಡಿಎಂಎ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಮುಹಮ್ಮದ್ ಶಿಯಾಬ್ @ ಶಿಯಾಬ್ , ಮೊಹಮ್ಮದ್ ನೌಷದ್ @ ನೌಷದ್, ಇಮ್ರಾನ್ @ ಇಂಬ, ನಿಸಾರ್ ಅಹಮ್ಮದ್ @ ನಿಸಾರ್ ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಸಿ.ಸಿ.ಬಿ. ಘಟಕದ ಎ.ಸಿ.ಪಿ. ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಸಿಸಿಬಿಯ ತಂಡವು ಖಚಿತ ಮಾಹಿತಿ ಸಂಗ್ರಹಿಸಿ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರಾಮ್ ಶೆಟ್ಟಿ ಕನ್ವಿನ್ಷನ್ ಹಾಲ್ ಬಳಿ ಒಂದು ಕಾರಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವೇಳೆ ದಾಳಿ ನಡೆಸಿದೆ.
ಆರೋಪಿತರನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ ಸುಮಾರು 50 ಲಕ್ಷ ಮೌಲ್ಯದ ಸುಮಾರು 517.76 ಗ್ರಾಂ ಎಂ.ಡಿ.ಎಂ.ಎ. ಎಂಬ ಮಾದಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ 10 ಲಕ್ಷ ಮೌಲ್ಯದ ನೀಲಿ ಬಣ್ಣದ ಮಾರುತಿ ಕಂಪನಿಯ FRONX ಮಾದರಿಯ ಕೆಎ-70-ಎಮ್ -7115 ಕಾರು, ಹಾಗೂ 5 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಮಾದಕ ವಸ್ತುವನ್ನು ಆರೋಪಿತರು ಬೆಂಗಳೂರಿನಲ್ಲಿ ಒಬ್ಬ ನೈಜೀರಿಯಾ ದೇಶದ ವ್ಯಕ್ತಿಯಿಂದ ತಂದು ಮಂಗಳೂರು ನಗರದ್ಯಾಂತ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶದಿಂದ ತಂದಿರುವುದಾಗಿ ತಿಳಿದು ಬಂದಿದೆ. ಆರೋಪಿತರ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:124/2025 ಕಲಂ:22(ಸಿ) , 21(C) ಎನ್.ಡಿ.ಪಿ.ಎಸ್. ಕಾಯ್ದೆ ಜೊತೆಗೆ 3(5) ಬಿ.ಎನ್.ಎಸ್. ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

RELATED ARTICLES
- Advertisment -
Google search engine

Most Popular