Sunday, May 3, 2026
Google search engine

Homeದೇಶಇಟ್ಟಿಗೆಯಿಂದ ಜಜ್ಜಿ ನಾಲ್ವರು ಮಕ್ಕಳ ಬರ್ಬರ ಹತ್ಯೆ: ತಾಯಿ ಮೇಲೆ ಶಂಕೆ

ಇಟ್ಟಿಗೆಯಿಂದ ಜಜ್ಜಿ ನಾಲ್ವರು ಮಕ್ಕಳ ಬರ್ಬರ ಹತ್ಯೆ: ತಾಯಿ ಮೇಲೆ ಶಂಕೆ

ಲಖನೌ: ನಾಲ್ಕು ಅಪ್ರಾಪ್ತ ಮಕ್ಕಳನ್ನ ಇಟ್ಟಿಗೆಯಿಂದ ಜಜ್ಜಿ, ಹರಿತವಾದ ಆಯುಧದಿಂದ ಇರಿದು ಬರ್ಬರವಾಗಿ ಕೊಲೆ ಮಾಡಿ ಮನೆಯಿಂದ ಎಸ್ಕೇಪ್​ ಆಗಿರುವ ಘಟನೆ ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ ನಡೆದಿದೆ.

ಬೀಗ ಹಾಕಿದ ಮನೆಯೊಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವಗಳನ್ನು ಕಂಡು ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ತಿಳಿದ ಕೂಡಲೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಕೊಲೆಯಾದವರು 8,10,12 ಮತ್ತು 14 ವರ್ಷ ವಯಸ್ಸಿನ ಮೂವರು ಗಂಡು ಮಕ್ಕಳು ಮತ್ತು ಓರ್ವ ಹೆಣ್ಣು ಮಗುವಾಗಿದೆ. ಈ ನಾಲ್ವರೂ ಒಡಹುಟ್ಟಿದವರಾಗಿದ್ದು, ಮನೆಯಲ್ಲಿ ಬೇರೆ ಯಾರೂ ಇಲ್ಲದ್ದಾಗ, ಮಕ್ಕಳನ್ನು ಕೊಲೆ ಮಾಡಲಾಗಿದೆ. ಈ ಘಟನೆ ಬಳಿಕ ತಾಯಿ ನಾಪತ್ತೆಯಾಗಿದ್ದು, ಆಕೆಯೇ ಮಕ್ಕಳನ್ನು ಕೊಂದು ನಾಪತ್ತೆಯಾಗಿರುವ ಅನುಮಾನ ವ್ಯಕ್ತವಾಗಿದೆ.

ಮನೆ ಮಕ್ಕಳ ತಾಯಿ ಹೆಸರಿನಲ್ಲೇ ನೋಂದಣಿಯಾಗಿದ್ದು, ಪ್ರಸ್ತುತ ಆಕೆಯೇ ಈ ತನಿಖೆಯ ಕೇಂದ್ರಬಿಂದುವಾಗಿದ್ದಾರೆ. ಪೊಲೀಸರು ಆಕೆಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಮಕ್ಕಳ ತಂದೆ ಕಳೆದ ಒಂದು ವರ್ಷದಿಂದ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಕ್ಕಳು ತನ್ನ ತಾಯಿ ಜೊತೆ ಇದೇ ಮನೆಯಲ್ಲಿ ವಾಸವಾಗಿದ್ದರು. ಆದರೆ ಈಗ ಇದ್ದಕ್ಕಿದ್ದಂತೆ ಮಕ್ಕಳು ಕೊಲೆಯಾಗಿದ್ದು, ತಾಯಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪ್ರಾಚಿ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಯಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

RELATED ARTICLES
- Advertisment -
Google search engine

Most Popular