ವರದಿ: ಎಡತೊರೆ ಮಹೇಶ್
ಹೆಚ್. ಡಿ.ಕೋಟೆ: ಹಾರ್ಟ್ ಸಂಸ್ಥೆ ಮೈಸೂರು ರೋಟರಿ ಕ್ಲಬ್ ಆಫ್ ಮೈಸೂರು ವೆಸ್ಟ್ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್. ಡಿ.ಕೋಟೆ ಗ್ರಾಮ ಪಂಚಾಯಿತಿ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಮಾದಾಪುರ ಇವರ ಸಹಯೋಗದೊಂದಿಗೆ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ರವಿಕುಮಾರ್.ಟಿ.ರವರು ಅಧ್ಯಕ್ಷತೆಯನ್ನು ವಹಿಸಿ ದೀಪ ಬೆಳಗುವುದರ ಮೂಲಕ ಕಾರ್ಯ ಕ್ರಮವನ್ನು ಉದ್ಘಾಟಿಸಿದರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಚಿಕ್ಕನಾಯ್ಕ ಉಪಾಧ್ಯಕ್ಷರಾದ ಉಮಾಶಂಕರ್ ವೈದ್ಯಾಧಿಕಾರಿಗಳಾದ ಡಾ. ಚಂದ್ರಕಲಾ ಉಪಸ್ಥಿತರಿದ್ದರು.

ನಂತರ ಹಾರ್ಟ್ ಸಂಸ್ಥೆಯ ಶಿವಲಿಂಗ ರವರು ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ನುಡಿಯನ್ನು ನುಡಿದರು.
ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ರವಿಕುಮಾರ್ ಮಾತನಾಡಿ ಈ ದಿನ ಹಾರ್ಟ್ ಸಂಸ್ಥೆ ಮೈಸೂರು,ಇವರು ಮಾದಾಪುರ ಗ್ರಾಮದಲ್ಲಿ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಿದ್ದು ಹಾಗೂ
ಹಳ್ಳಿಗಾಡಿನ ಜನರಿಗೆ ಆರೋಗ್ಯ ವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವ ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸೆನಿಯ ಹಾಗೂ ತುಂಬಾ ಸಂತೋಷಕರ ವಿಷಯವಾಗಿದೆ ನಾವು ಇಂದು ಮೂರನೇ ಬಾರಿ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ನಡೆಸುತ್ತಿದ್ದೇವೆ. ಈ ಶಿಬಿರದಲ್ಲಿ ಕಣ್ಣಿನ ಪರೀಕ್ಷೆ, ಮಧುಮೇಹ ಮತ್ತು ರಕ್ತದೊತ್ತಡ, ಹೃದಯ ಸಂಬಂಧಿತ ತೊಂದರೆಗಳು, 40 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಮುಟ್ಟಿನ ಕಾಯಿಲೆ ಬಗ್ಗೆ ತಪಾಸಣೆ ಮಾಡಿ. ಪಾಪ್ ಸ್ಮಿಯರ್ ಮಾಡಲಾಗುತ್ತದೆ ಮತ್ತು ಉಸಿರಾಟದಲ್ಲಿ ತೊಂದರೆ ಬಗ್ಗೆ ತಪಾಸಣೆ ಮಾಡಲಾಗುತ್ತದೆ ಇಸಿಜಿ ತಪಾಸಣೆ ಮಾಡಲಾಗುತ್ತದೆ, ಸುತ್ತಮುತ್ತಲ ಗ್ರಾಮದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಶಿಬಿರವನ್ನು ಯಶಸ್ವಿಗೊಳಿಸಿ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಇಂತಹ ಆರೋಗ್ಯ ಕಾರ್ಯಕ್ರಮಗಳು ಹೆಚ್ಚಿನದಾಗಿ ಆಗಬೇಕು ಮತ್ತು ಇತ್ತೀಚಿನ ದಿನಗಳಲ್ಲಿ ಕ್ಯಾನರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕ್ಯಾನರ್ ಆರೋಗ್ಯ ಶಿಬಿರಗಳನ್ನು ಆಯೋಜಿಸುವಂತೆ ಹಾರ್ಟ್ ಸಂಸ್ಥೆ ಯವರಿಗೆ ಮನವಿ ಮಾಡಿದರು.
ನಂತರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಉಮಾ ಶಂಕರ್ ರವರು ಮಾತನಾಡಿ ನಮ್ಮ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಿರುವುದು ತುಂಬಾ ಸಂತೋಷಕರ ವಿಷಯ ಆದರೆ ಮುಂದಿನ ದಿನಗಳಲ್ಲಿ ಶಿಬಿರವನ್ನು ಆಯೋಜನೆ ಮಾಡಿದಾಗ ಶಿಬಿರದ ಬಗ್ಗೆ ಹೆಚ್ಚು ಹೆಚ್ಚು ಪ್ರಚಾರವನ್ನು ಮಾಡಿ ಜನರಿಗೆ ಅನುಕೂಲವನ್ನು ಮಾಡಿಕೊಡಿ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ರವಿರಾಜ್.ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರಾದ ,ವೀಣಾ,ಮಾದಮ್ಮ, ದೊರೆ, ಶಶಿರೇಖಾ, ಜಯಂತಿ, ನಾರಾಯಣಾ ಹೆಲ್ತ್ ಸಾಮಾನ್ಯ ರೋಗ ತಜ್ಞರಾದ ಡಾ. ಹರ್ಷಿತಾ, ಸಿಪ್ಲ ಬ್ರಿತ್ ಫ್ರೀ, ಪಿ ಎಫ್ ಟಿ ಪರೀಕ್ಷೆ ತಂಡ ಹಾಗೂ ಪ್ರಶಾಂತ್ ಮತ್ತು ತಂಡದವರು, ಎ ಎಸ್ ಜಿ ಕಣ್ಣಿನ ಆಸ್ಪತ್ರೆಯ ಮಹೇಶ್ ಮತ್ತು ತಂಡದವರು ಆಶಾ ಬಸ್ ಕಾರ್ಯಕರ್ತೆಯರು ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.

ಈ ಶಿಬಿರದಲ್ಲಿ ಬಿಪಿ ಶುಗರ್ 60, ಸಾಮಾನ್ಯ ರೋಗ ತಪಾಸಣೆ 75, 40 ಜನ ಕಣ್ಣಿನ ಪರೀಕ್ಷೆ, ಪಿ ಎಫ್ ಟಿ ಪರೀಕ್ಷೆ 10, ಇಸಿಜಿ 25 ಜನರು ಈ ಶಿಬಿರದಲ್ಲಿ ಪ್ರಯೋಜನವನ್ನು ಪಡೆದಿರುತ್ತಾರೆ.