ಗುಂಡ್ಲುಪೇಟೆ: ಪಟ್ಟಣದಲ್ಲಿ ಮುಸ್ಲಿಂ ಅಪರಿಚಿತ ಮಾನಸಿಕ ಅಸ್ವಸ್ಥ ಮೃತಪಟ್ಟ ಹಿನ್ನೆಲೆ ಮುಸ್ಲಿಂ ಮುಖಂಡರು ಮುಸ್ಲಿಂ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ಗುಂಡ್ಲುಪೇಟೆಯಲ್ಲಿ ಅಪರಿಚಿತ ಮಾನಸಿಕ ಅಸ್ವಸ್ಥ ಮೃತಪಟ್ಟ ಹಿನ್ನೆಲೆ ಶವವನ್ನು ಚಾಮರಾಜನಗರ ಮೆಡಿಕಲ್ ಕಾಲೇಜಿನಲ್ಲಿ ಇರಿಸಲಾಗಿತ್ತು. ನಂತರ ವಾರಸುದಾರರು ಇಲ್ಲದ ಕಾರಣ ಪೋಲೀಸರಾದ ಸಂತೊಶ್, ಬಸವರಾಜೇಂದ್ರ ಸಮ್ಮುಖದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಸ್ವಯಂ ಪ್ರೇರಿತರಾಗಿ ಗುಂಡ್ಲುಪೇಟೆಯ ಖಬರಸ್ತಾನದಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಗುಂಡ್ಲುಪೇಟೆಯ ಮುಸ್ಲಿಂ ಮುಖಂಡರಾದ ಇಮ್ರಾನ್ ಖಾನ್, ಎಸ್ಡಿಪಿಐ ತಾಲೂಕು ಅಧ್ಯಕ್ಷ ಸಯ್ಯದ್ ಅಕ್ರಂ, ಮುಜಮ್ಮಿಲ್, ಇಸ್ಲಾಂ ತೌಸಿಫ್, ಸರ್ದಾರ್ ಇತರರು ಇದ್ದರು.