Friday, October 3, 2025
Google search engine

Homeರಾಜ್ಯಸುದ್ದಿಜಾಲದೇಶದ ಸ್ವಚ್ಛತೆಗೂ ಆದ್ಯತೆ ನೀಡಿದ್ದ ಗಾಂಧೀಜಿ : ಮೇಯರ್ ಮಂಗೇಶ ಪವಾರ

ದೇಶದ ಸ್ವಚ್ಛತೆಗೂ ಆದ್ಯತೆ ನೀಡಿದ್ದ ಗಾಂಧೀಜಿ : ಮೇಯರ್ ಮಂಗೇಶ ಪವಾರ

ವರದಿ: ಸ್ಟೀಫನ್ ಜೇಮ್ಸ್

ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ವೀರಸೌಧದಲ್ಲಿ ಏರ್ಪಡಿಸಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಜೀವನವನ್ನು ಪ್ರೇರಣೆಯಾಗಿ ತೆಗೆದುಕೊಂಡು ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಬೇಕು. ದೇಶ ಕಂಡ ಮಹಾನ್ ನಾಯಕ ಲಾಲ್ ಬಹದ್ದೂರ್ ಶಾಸ್ತ್ರಿ, ಸರಳ, ಸಜ್ಜನ ವ್ಯಕ್ತಿತ್ವ ಹೊಂದಿದರು. ಅವರಂತೆ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ದಕ್ಷ ಅಧಿಕಾರಿಯಾಗಿ ದೇಶ ಸೇವೆ ಮಾಡಬೇಕು ಎಂದರು.

ಸಾಹಿತಿ ಪ್ರಕಾಶ ಗಿರಿಮಲ್ಲನ್ನವರ ಮಾತನಾಡಿ, ಬೆಳಗಾವಿಯಲ್ಲಿ ನೂರು ವರ್ಷದ ಹಿಂದೆ ಎರಡು ಲಕ್ಷ ಹಣ ಖರ್ಚು ಮಾಡಿ ನಡೆಸಿದ್ದ ಅಧಿವೇಶನದ ಅಧ್ಯಕ್ಷತೆಯನ್ನು ಗಾಂಧೀಜಿ ವಹಿಸಿದ್ದರಿಂದ ಬೆಳಗಾವಿಗೂ ರಾಷ್ಟ್ರಮಟ್ಟದ ಕೀರ್ತಿ ಪ್ರಾಪ್ತವಾಯಿತು. ಗಾಂಧೀಜಿ ಜತೆ ಅನೇಕ ರಾಷ್ಟ್ರೀಯ ಮುಖಂಡರು ಆಗಮಿಸಿದ್ದರು. ಈ ಅಧಿವೇಶನದಲ್ಲಿ ಮೊಟ್ಟ ಮೊದಲ ಬಾರಿಗೆ ಹುಯಿಲಗೋಳ ನಾರಾಯಣರಾಯರು ಬರೆದ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಎಂಬ ಗೀತೆಯನ್ನು ಗಂಗೂಬಾಯಿ ಹಾನಗಲ್ ಹಾಡಿದ್ದು ಇತಿಹಾಸ ಆಗಿದೆ ಎಂದು ವಿವರಿಸಿದರು.

ಸ್ವಾತಂತ್ರ ಹೋರಾಟಗಾರ ರಾಜೇಂದ್ರ ಕಲಘಟಗಿ, ಶಾಸಕ ಆಸ್‌ತಿ ಸೇರ್, ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ, ಜಿಪಂ ಸಿಇಒ ರಾಹುಲ ಶಿಂಧೆ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ, ಉಪ ಮೇಯ‌ರ್ ವಾಣಿವಿಲಾಸ ಜೋಶಿ, ಪಾಲಿಕೆ ಆಯುಕ್ತ ಶುಭ ಬಿ., ಉಪ ಆಯುಕ್ತ ಉದಯಕುಮಾರ ತಳವಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್.ಡಿ.ಕೋಳೇಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಈಶ್ವರ ಗಡಾದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇತರರಿದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ವಿನಾಯಕ ಮೋರೆ ಹಾಗೂ ತಂಡದವರು ಭಜನೆ ಪ್ರಸ್ತುತಪಡಿಸಿದರು. ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಜರುಗಿತು. ಸರ್ವಮಂಗಳಾ ಅರಳಿಮಟ್ಟಿ ನಿರೂಪಿಸಿ, ವಂದಿಸಿದರು.

RELATED ARTICLES
- Advertisment -
Google search engine

Most Popular