ಯಾದಗಿರಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ಕು ಗುಡಿಸಲುಗಳು ಸುಟ್ಟು ಭಸ್ಮವಾದ ಘಟನೆ ಸುರಪುರದ ಮಲ್ಲಾ ಬಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಲ್ಲಾರೆಡ್ಡಿ ಹಾಗೂ ಮಲ್ಕಪ್ಪ ಎನ್ನುವವರಿಗೆ ಸೇರಿದ ಗುಡಿಸಲುಗಳು ಸಿಲಿಂಡರ್ ಸ್ಫೋಟದಿಂದ ಹೊತ್ತಿ ಉರಿದಿವೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಒಂದು ಗಂಟೆ ಕಾಲ ಹರಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಕೆಂಭಾವಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.