Thursday, July 17, 2025
Google search engine

Homeಸ್ಥಳೀಯತಾಯಿ ಚಾಮುಂಡೇಶ್ವರಿ ವರ್ಧಂತಿ ಉತ್ಸವ: ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

ತಾಯಿ ಚಾಮುಂಡೇಶ್ವರಿ ವರ್ಧಂತಿ ಉತ್ಸವ: ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

ಮೈಸೂರು: ಮೈಸೂರು ರಾಜವಂಶದ ಕುಲದೇವತೆಯಾಗಿರುವ ಚಾಮುಂಡೇಶ್ವರಿ ತಾಯಿಯ ವರ್ಧಂತಿ ಉತ್ಸವ ಚಾಮುಂಡಿಬೆಟ್ಟದಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನಡೆಯಿತು. ಮುಂಜಾನೆ 4 ಗಂಟೆಗೆ ಪೂಜಾ ಕೈಂಕರ್ಯಗಳು ಆರಂಭವಾಗಿ, ದೇವಿ ಕೆರೆಯಿಂದ ತಂದ ಶುದ್ಧ ಜಲದಿಂದ ಅಭಿಷೇಕ, ನಂತರ ಪಂಚಾಮೃತ ಮತ್ತು ರುದ್ರಾಭಿಷೇಕ, ಹೂವಿನ ಅಲಂಕಾರ, ಕುಂಕುಮಾರ್ಚನೆ, ಸಹಸ್ರನಾಮಾರ್ಚನೆ ನೆರವೇರಿದವು.

ಮಹಾ ಮಂಗಳಾರತಿಯ ನಂತರ ಉತ್ಸವ ಮೂರ್ತಿಗೆ ಬೆಳ್ಳಿ ಮತ್ತು ಚಿನ್ನದ ಪಲ್ಲಕ್ಕಿಯಲ್ಲಿ ಮೆರವಣಿಗೆ ನಡೆಸಲಾಯಿತು. ಮಂಗಳವಾದ್ಯ, ಅರಮನೆ ಬ್ಯಾಂಡ್, ಛತ್ರಿ, ಚಾಮರಗಳೊಂದಿಗೆ ಮೆರವಣಿಗೆ ಮೆರೆಗುಟ್ಟಿತು. ಭಕ್ತರ ಭಾರೀ ಆಕ್ರಶದಿಂದ ಜಿಲ್ಲಾಡಳಿತ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿತು. ಖಾಸಗಿ ವಾಹನ ಪ್ರವೇಶ ನಿರ್ಬಂಧಿಸಿ ಲಲಿತ ಮಹಲ್ ಹೆಲಿಪ್ಯಾಡ್‌ನಿಂದ ಉಚಿತ ಬಸ್ ಸೇವೆ ಕಲ್ಪಿಸಲಾಯಿತು. ನಗರದೆಲ್ಲೆಡೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು.

RELATED ARTICLES
- Advertisment -
Google search engine

Most Popular