ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಐಶ್ವರ್ಯ ಗೌಡಳನ್ನು ಅರೆಸ್ಟ್ ಮಾಡಿದ್ದಾರೆ. ಇಡಿ ಬಂಧನ ಪ್ರಶ್ನಿಸಿ ಐಶ್ವರ್ಯಗೌಡ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ಐಶ್ವರ್ಯ ಗೌಡ ಅರ್ಜಿಯ ವಿಚಾರಣೆ 22ಕ್ಕೆ ಮುಂದೂಡಿ ಆದೇಶ ಹೊರಡಿಸಿದರು.
ಇಂದು ಇಡಿ ಬಂಧನ ಪ್ರಶ್ನಿಸಿ ಐಶ್ವರ್ಯ ಗೌಡ ಅರ್ಜಿ ಸಲ್ಲಿಸಿದ್ದು, ವಂಚನೆ ಪ್ರಕರಣದಲ್ಲಿ ಐಶ್ವರ್ಯಗೌಡ ಅರೆಸ್ಟ್ ಆಗಿದ್ದಾರೆ. ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ ಎಂದು ಐಶ್ವರ್ಯ ಗೌಡ ಪರವಾಗಿ ಹಿರಿಯ ವಕೀಲ ಸಂದೇಶ ಚೌಟ ವಾದ ಮಂಡಿಸಿದರು. ವಂಚನೆ ಸೇರಿದಂತೆ ಹಲವು ಆರೋಪಗಳನ್ನು ಐಶ್ವರ್ಯ ಕೂಡ ಎದುರಿಸುತ್ತಿದ್ದಾಳೆ. ಈ ಸಂದರ್ಭದಲ್ಲಿ ಇಡಿ ಪರ ವಕೀಲರಿಂದ ವಾದ ಮಂಡನೆಗೆ ಕಾಲಾವಕಾಶ ಕೋರಲಾಯಿತು. ಬಳಿಕ ವಿಚಾರಣೆಯನ್ನು ಹೈಕೋರ್ಟ್ ಮೇ 22ಕ್ಕೆ ಮುಂದೂಡಿತು.