ವರದಿ: ಸ್ಟೀಫನ್ ಜೇಮ್ಸ್
ಹುಬ್ಬಳ್ಳಿ: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಡುವ ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರಿಗೆ ನೈರುತ್ಯ ರೈಲ್ವೆಯು ಸಿಹಿ ಸುದ್ದಿಯನ್ನು ನೀಡಿದೆ.
ನೈರುತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೆಳಗಾವಿ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಿದೆ. ಅಕ್ಟೋಬರ್ 17 ಹಾಗೂ 22 ರಂದು ಈ ರೈಲು ಸಂಚಾರ ನಡೆಸಲಿದೆ.
ರೈಲು ಸಂಖ್ಯೆ 06503 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 17, 2025ರಂದು ಸಂಜೆ 5:30 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 5:30 ಗಂಟೆಗೆ ಬೆಳಗಾವಿ ತಲುಪಲಿದೆ.
ರೈಲು ಸಂಖ್ಯೆ 06504 ಬೆಳಗಾವಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 22, 2025 ರಂದು ಬೆಳಗಾವಿಯಿಂದ ಸಂಜೆ 5:30 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 5:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.
ವಿಶೇಷ ರೈಲು ಎಲ್ಲೆಲ್ಲಿ ನಿಲುಗಡೆ?
ಈ ವಿಶೇಷ ರೈಲು ಮಾರ್ಗಮಧ್ಯೆ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ಳಾವರ ಮತ್ತು ಲೊಂಡಾ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ಈ ರೈಲು 19 ಬೋಗಿಗಳನ್ನು ಒಳಗೊಂಡಿದ್ದು, ಅವುಗಳಲ್ಲಿ 01 ಎಸಿ 2-ಟೈರ್, 03 ಎಸಿ 3-ಟೈರ್, 10 ಕ್ಲೀಪರ್ ಕ್ಲಾಸ್, 03 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಎಸ್‌ಎಲ್‌ಆರ್/ಡಿ ಬೋಗಿಗಳು ಇರಲಿವೆ.