ಮಂಗಳೂರು(ದಕ್ಷಿಣ ಕನ್ನಡ): ದ.ಕ.ಜಿಲ್ಲೆಯ ಮಂಗಳೂರು, ಪುತ್ತೂರು, ಬಂಟ್ವಾಳ, ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸಹಿತ ಹಲವಡೆ ಇಂದು ಬೆಳಗ್ಗೆ ಉತ್ತಮ ಮಳೆ ಸುರಿಯಿತು.
ಬಳಿಕ ಮೋಡಕವಿದ ವಾತಾವರಣ ಕಂಡುಬಂದಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಜೂ.25, 26ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸಮುದ್ರದಿಂದ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ ಎಂದು ತಿಳಿಸಿದೆ.