Wednesday, May 21, 2025
Google search engine

Homeಅಪರಾಧಸ್ಕೂಟರ್ ಗೆ ಸರಕಾರಿ ಬಸ್ ಢಿಕ್ಕಿ: ವಿದ್ಯಾರ್ಥಿನಿಗೆ ಗಂಭೀರ ಗಾಯ

ಸ್ಕೂಟರ್ ಗೆ ಸರಕಾರಿ ಬಸ್ ಢಿಕ್ಕಿ: ವಿದ್ಯಾರ್ಥಿನಿಗೆ ಗಂಭೀರ ಗಾಯ

ಪುಂಜಾಲಕಟ್ಟೆ: ಸರಕಾರಿ ಬಸ್ ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ವಿದ್ಯಾರ್ಥಿನಿಯೋರ್ವಳು ಗಂಭೀರವಾಗಿ ಗಾಯಗೊಂಡ ಘಟನೆ ಜ. 10ರ ಬುಧವಾರ ಬೆಳಿಗ್ಗೆ ವಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಅಲ್ಲಿಪಾದೆ ಪೆರಿಯಾರ್ ದೋಟ ನಿವಾಸಿ ಗೋಪಾಲ ಸಫಲ್ಯ ಅವರ ಪುತ್ರಿ, ವಾಮದಪದವು ಕಾಲೇಜು ವಿದ್ಯಾರ್ಥಿನಿ ಪಲ್ಲವಿ ಗಾಯಗೊಂಡಿದ್ದು, ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಧರ್ಮಸ್ಥಳ ಕಡೆಯಿಂದ ಮಂಗಳೂರಿಗೆ ಸಾಗುತ್ತಿದ್ದ ಸರಕಾರಿ ಬಸ್ ಇನ್ನೊಂದು ಬಸ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬಲಭಾಗದಲ್ಲಿ ಬಂದು ಸ್ಕೂಟರ್ ಗೆ ಢಿಕ್ಕಿಯಾಗಿತ್ತು.

RELATED ARTICLES
- Advertisment -
Google search engine

Most Popular