Tuesday, May 20, 2025
Google search engine

Homeಅಪರಾಧಕಾನೂನುಸರ್ಕಾರಿ ನೌಕರ ಕ್ರಿಮಿನಲ್ ಕೇಸಿನಲ್ಲಿ ದೋಷಿಯಾದ್ರೆ ಮತ್ತೆ ಸೇವೆಗೆ ಅವಕಾಶವಿಲ್ಲ: ಹೈಕೋರ್ಟ್

ಸರ್ಕಾರಿ ನೌಕರ ಕ್ರಿಮಿನಲ್ ಕೇಸಿನಲ್ಲಿ ದೋಷಿಯಾದ್ರೆ ಮತ್ತೆ ಸೇವೆಗೆ ಅವಕಾಶವಿಲ್ಲ: ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರನು ಕ್ರಿಮಿನಲ್ ಪ್ರಕರಣಗಳಲ್ಲಿ ದೋಷಿಯಾಗಿ ಜೈಲು ಶಿಕ್ಷೆಗೆ ಒಳಗಾದಲ್ಲಿ, ಅಂತರ ಸರ್ಕಾರಿ ನೌಕರ ಪುನಃ ಸೇವೆಯಲ್ಲಿ ಮುಂದುವರೆಯಲು ಅವಕಾಶವಿಲ್ಲ ಎಂಬುದಾಗಿ ಹೈಕೋರ್ಟ್ ಸ್ಪಷ್ಟ ಪಡಿಸಿದೆ.

ಬೆಂಗಳೂರಿನ ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಕರಾಗಿದ್ದಂತ ನಂಜೇಗೌಡ ಎಂಬುವರನ್ನು 2001ರಲ್ಲಿ ನಡೆದಿದ್ದಂತ ಹಲ್ಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿದ್ದರು. ಹೀಗಾಗಿ ಅವರನ್ನು ಉದ್ಯೋಗದಿಂದ ವಜಾಗೊಳಿಸಲಾಗಿತ್ತು.

ಈ ವಜಾ ಆದೇಶವನ್ನು ಪ್ರಶ್ನಿಸಿ ನಂಜೇಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ವಿಭಾಗೀಯ ಪೀಠವು, ಅರ್ಜಿಯನ್ನು ತಿರಸ್ಕರಿಸಿದೆ. ಅಲ್ಲದೇ ಕ್ರಿಮಿನಲ್ ಪ್ರಕರಣಗಳಲ್ಲಿ ದೋಷಿಯಾಗಿ ಜೈಲು ಶಿಕ್ಷೆಗೆ ಒಳಗಾದ ಸರ್ಕಾರಿ ನೌಕರ ಪುನಹ ಸೇವೆಯಲ್ಲಿ ಮುಂದುವರೆಯಲು ಅವಕಾಶವಿಲ್ಲ ಅಂತ ಸ್ಪಷ್ಟ ಪಡಿಸಿದರು.

ಅಂದಹಾಗೇ 2001ರಲ್ಲಿ ಬೆಂಗಳೂರು ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದಂತ ನಂಜೇಗೌಡ ಅವರ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದಂತ ನ್ಯಾಯಾಲಯವು 2011ರಲ್ಲಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಜೈಲು ಶಿಕ್ಷೆ ಪೂರೈಸಿ ಬಂದ ಬಳಿಕ ಮತ್ತೆ ಸೇವೆಗೆ ಸೇರ್ಪಡೆಗೊಳಿಸುವಂತೆ ಹೈಕೋರ್ಟ್ ಗೆ ಮೊರೆ ಹೋಗಿದ್ದರು. ಈ ವೇಳೆ ಅವರ ಅರ್ಜಿ ವಜಾಗೊಳಿಸಿರುವಂತ ಹೈಕೋರ್ಟ್, ಸರ್ಕಾರಿ ನೌಕರ ಕ್ರಿಮಿನಲ್ ಕೇಸಲ್ಲಿ ದೋಷಿಯಾದ್ರೆ ಮತ್ತೆ ಸೇವೆಗೆ ಅವಕಾಶವಿಲ್ಲ ಎಂಬುದಾಗಿ ತಿಳಿಸಿದೆ.

RELATED ARTICLES
- Advertisment -
Google search engine

Most Popular