Monday, November 3, 2025
Google search engine

Homeರಾಜಕೀಯಆಂತರಿಕ ಕಚ್ಚಾಟದಲ್ಲಿ ಅಭಿವೃದ್ದಿ ಮರೆತ ಸರ್ಕಾರ: ಬಿ ವೈ ವಿಜಯೇಂದ್ರ ಕಿಡಿ

ಆಂತರಿಕ ಕಚ್ಚಾಟದಲ್ಲಿ ಅಭಿವೃದ್ದಿ ಮರೆತ ಸರ್ಕಾರ: ಬಿ ವೈ ವಿಜಯೇಂದ್ರ ಕಿಡಿ

ಚಿತ್ರದುರ್ಗ:  ಸಂಪುಟ ಪುನಾರಚನೆ, ಸಿಎಂ ಬದಲಾವಣೆ ವಿಚಾರದ ಆಂತರಿಕ ಕಚ್ಚಾಟದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ದಿ ಮರೆತಿದೆ. ರಾಜ್ಯದಲ್ಲಿ ಇಂತಹ ಸಿಎಂ ಇದ್ದರೇನು, ಬಿದ್ದರೇನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಸಿಎಂ ಕುರ್ಚಿ ಕಾಳಗ ದಿನೇದಿನೇ ಹೆಚ್ಚಾಗುತ್ತಿದೆ. ಸಿಎಂ ಮಾತನ್ನು ಆಡಳಿತ ಪಕ್ಷದವರೇ ಒಪ್ಪಿಕೊಳ್ಳುತ್ತಿಲ್ಲ, ಇನ್ನು ನಾವ್ಯಾರು. ಸಿದ್ದರಾಮಯ್ಯ ಐದು ವರ್ಷ ನಾನೇ ಸಿಎಂ ಎನ್ನುತ್ತಿದ್ದರು. ನಿನ್ನೆ ಹೈಕಮಾಂಡ್ ಆಶೀರ್ವಾದ ಮಾಡಿದರೆ ಐದು ವರ್ಷ ನಾನೇ ಸಿಎಂ ಅಂದಿದ್ದಾರೆ. ನವೆಂಬರ್ ಕ್ರಾಂತಿ ಎಂದು ಆಡಳಿತ ಪಕ್ಷದ ಶಾಸಕರು, ಸಚಿವರೇ ಮಾತನಾಡುತ್ತಿದ್ದಾರೆ. ಇದು ತಾರ್ಕಿಕ ಅಂತ್ಯಕ್ಕೆ ಹೋಗುತ್ತದೆ ಎನ್ನುವ ಮುನ್ಸೂಚನೆ ಕಾಣುತ್ತಿದೆ ಎಂದು ಲೇವಡಿ ಮಾಡಿದರು.

ಗ್ಯಾರಂಟಿಯಿಂದ ಹಿಮಾಚಲ ಪ್ರದೇಶದಲ್ಲಿ ಸಂಕಷ್ಟ ಉಂಟಾಗಿದೆ.  ತೆಲಂಗಾಣದ ಸಿಎಂ ನೌಕರರಿಗೆ ಸಂಬಳ ಕೊಡಲು ಆಗುತ್ತಿಲ್ಲ ಎಂದಿದ್ದಾರೆ. ರಾಜ್ಯದಲ್ಲೂ ಸರ್ಕಾರ ನೌಕರರಿಗೆ ಸಂಬಳ ಕೊಡಲು ಆಗುತ್ತಿಲ್ಲ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವಾಗುತ್ತಿದೆ. ಸರ್ಕಾರಕ್ಕೆ ಗೃಹ ಸಚಿವರಿಗೆ ಕಾಳಜಿ ಇಲ್ಲ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

RELATED ARTICLES
- Advertisment -
Google search engine

Most Popular