Saturday, January 10, 2026
Google search engine

Homeರಾಜ್ಯರಾಜ್ಯ ಸರ್ಕಾರದ ಮಸೂದೆಗಳನ್ನು ವಾಪಸ್ ಕಳುಹಿಸಿದ ರಾಜ್ಯಪಾಲರು : ಗವರ್ನರ್ ನಡೆಗೆ ತೀವ್ರ ಖಂಡನೆ

ರಾಜ್ಯ ಸರ್ಕಾರದ ಮಸೂದೆಗಳನ್ನು ವಾಪಸ್ ಕಳುಹಿಸಿದ ರಾಜ್ಯಪಾಲರು : ಗವರ್ನರ್ ನಡೆಗೆ ತೀವ್ರ ಖಂಡನೆ

ಬೆಂಗಳೂರು : ಕಳೆದ ಬೆಳಗಾವಿ ಅಧಿವೇಶನದಲ್ಲಿ ರಾಜ್ಯಪಾಲರ ಅಂಗೀಕಾರಕ್ಕೆ ರಾಜ್ಯ ಸರ್ಕಾರ ಹಲವು ಮಸೂದೆಗಳನ್ನು ಕಳುಹಿಸಿಕೊಡಲಾಗಿತ್ತು ಆದರೆ ರಾಜ್ಯಪಾಲರು ಮಸೂದೆಗಳನ್ನು ಅಂಗೀಕಾರ ಹಾಕದೆ ವಾಪಸ್ ಕಳಿಸಿದ್ದಾರೆ ಇದೀಗ ರಾಜ್ಯಪಾಲರ ನಡೆಗೆ ರಾಜ್ಯ ಸರ್ಕಾರ ತೀವ್ರವಾಗಿ ಖಂಡಿಸಿದ್ದು ಕಾನೂನು ಹೋರಾಟಕ್ಕೆ ಚಿಂತನೆ ನಡೆಸಿದೆ.

ಸರ್ಕಾರದ ನಾಲ್ಕು ಮಸೂದೆಗಳನ್ನು ರಾಜ್ಯಪಾಲರು ಇದೀಗ ವಾಪಸ್ ಕಳುಹಿಸಿದ್ದಾರೆ. ಅಲ್ಲದೇ ಇನ್ನು ನಾಲ್ಕು ಮಸೂದೆ ಅಂಗೀಕರಿಸಲು ರಾಜ್ಯಪಾಲರು ಬಾಕಿ ಉಳಿಸಿಕೊಂಡಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ನಾಲ್ಕು ವಿಧೇಯಕ ಅಂಗೀಕಾರಗೊಂಡಿತ್ತು. ಆದರೆ ರಾಜ್ಯಪಾಲರು ನಾಲ್ಕು ವಿಧೇಯಕಗಳಿಗೆ ಅಂಗೀಕಾರ ಹಾಕದೆ ವಾಪಸ್ ಕಳುಹಿಸಿದ್ದಾರೆ. ಹಾಗಾಗಿ ಇದೀಗ ಗವರ್ನರ್ ವಿರುದ್ಧ ರಾಜ್ಯ ಸರ್ಕಾರ ಆಕ್ರೋಶ ಹೊರಹಾಕಿದ್ದು ಕಾನೂನು ಹೋರಾಟಕ್ಕೆ ಚಿಂತನೆ ನಡೆಸುತ್ತಿದೆ.

ರಾಜ್ಯಪಾಲರಿಂದ ವಾಪಸ್ ಕಳುಹಿಸಿದ ಮಸೂದೆಗಳು

1) ಕರ್ನಾಟಕ ಮಿನರಲ್ಸ್ ಹಕ್ಕು ಮತ್ತು ಬೇರಿಂಗ್ ಲ್ಯಾಂಡ್ ಟ್ಯಾಕ್ಸ್ 2024

2) ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಮುಜರಾಯಿ ವಿಧೇಯಕ 2024

3) ಕರ್ನಾಟಕ ಸಹಕಾರಿ ಸಹಿತಿಗಳ ತಿದ್ದುಪಡಿ ವಿಧೇಯಕ 2024

4) ಗದಗ ಬೆಟಗೇರಿ ವ್ಯಾಪಾರ ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ವಿಧೇಯಕ 2024

ಈ ನಾಲ್ಕು ವಿಧೇಯಕಗಳನ್ನು ಅಂಗೀಕರಿಸಿದೆ ವಾಪಸ್ ಕಳಿಸಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ಇದೀಗ ರಾಜ್ಯ ಸರ್ಕಾರ ರಾಜ್ಯಪಾಲರ ಈ ನಡೆಯಿಂದ ಆಕ್ರೋಶಗೊಂಡಿದ್ದು ಕಾನೂನಿನ ಮೂಲಕ ಹೋರಾಟ ನಡೆಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular