Wednesday, May 21, 2025
Google search engine

Homeರಾಜ್ಯರಾಜ್ಯ ಸರ್ಕಾರಿ ನೌಕರರಿಗೆ 3.75%ರಷ್ಟು DA ಹೆಚ್ಚಿಸಿ ಸರ್ಕಾರ ಆದೇಶ

ರಾಜ್ಯ ಸರ್ಕಾರಿ ನೌಕರರಿಗೆ 3.75%ರಷ್ಟು DA ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ (DA) ಹೆಚ್ಚಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿದೆ.

ಡಿಎಯನ್ನು ಪ್ರಸಕ್ತ ಶೇ. 38.75 ರಿಂದ ಶೇ. 42.50ಗೆ ಹೆಚ್ಚಿಸಿ ಆದೇಶಿಸಿದೆ. ಆ ಮೂಲಕ 3.75% ರಷ್ಟು ಹೆಚ್ಚಳ ಮಾಡಿದೆ. ಜನವರಿ 1 ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ಜಾರಿಗೆ ಬರಲಿದೆ. ಆ ಮೂಲಕ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣಾ ಹೊತ್ತಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.

ನಿವೃತ್ತ ರಾಜ್ಯ ಸರ್ಕಾರಿ ನೌಕರರನ್ನು ಒಳಗೊಂಡು UGC ICR ಮತ್ತು ಜಿಲ್ಲಾ ಪಂಚಾಯತ್ ಪೂರ್ಣವಧಿ ನೌಕರರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ಈ ವೇತನ ಹೆಚ್ಚಳ ಅನ್ವಯವಾಗಲಿದೆ. ಈ ಡಿಎ ಹೆಚ್ಚಳದಿಂದ ರಾಜ್ಯದ ಬೊಕ್ಕಸಕ್ಕೆ 1,702.71 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ.

ಕೇಂದ್ರ ಸರ್ಕಾರ ತನ್ನ ನೌಕರರಿಗೆ 1-01-2024ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4 ರಷ್ಟು ತುಟ್ಟಿಭತ್ಯೆಯನ್ನು ಈಗಾಗಲೇ ಮಂಜೂರು ಮಾಡಿದೆ. ಅದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ತನ್ನ ನೌಕರರಿಗೂ ಡಿಎ ಹೆಚ್ಚಿಸಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರ ಸಂಘ ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ಕರ್ನಾಟಕ ರಾಜ್ಯ ಸರ್ಕಾರವೂ ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಈ ಹಿಂದಿನಿಂದಲೂ ಮಂಜೂರು ಮಾಡಿರುತ್ತದೆ. ಅದರಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 01-01-2024 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸುವಂತೆ ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದರು.

RELATED ARTICLES
- Advertisment -
Google search engine

Most Popular